ಮೈಸೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಶಾಸಕರು ಈ ವೇಳೆ ಸಾಥ್ ನೀಡಿದ್ದಾರೆ.
ಇಂದು ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಪಾದಯಾತ್ರೆಗೆ ಚಾಲನೆಗೂ ಮುನ್ನ ಹೆಚ್.ಡಿ.ಕುಮಾರಸ್ವಾಮಿ ದೇಗುಲಕ್ಕೆ ಭೇಟಿ ನೀಡಿರುವುದು ಗಮನ ಸೆಳೆದಿದೆ.

