HomeKarnatakaನಂದಿ ಹಿಲ್ಸ್​​ ಮಾನ್ಸೂನ್​ ಮ್ಯಾರಥಾನ್ ಓಟದ ವೇಳೆ ಕ್ರೀಡಾಪಟು ಹೃದಯಾಘಾತದಿಂದ ಸಾವು

ನಂದಿ ಹಿಲ್ಸ್​​ ಮಾನ್ಸೂನ್​ ಮ್ಯಾರಥಾನ್ ಓಟದ ವೇಳೆ ಕ್ರೀಡಾಪಟು ಹೃದಯಾಘಾತದಿಂದ ಸಾವು

ಚಿಕ್ಕಬಳ್ಳಾಪುರ: ನಂದಿ ಹಿಲ್ಸ್​​ ಮಾನ್ಸೂನ್​ ಮ್ಯಾರಥಾನ್ ವೇಳೆ ದುರಂತವೊಂದು ಸಂಭವಿಸಿದೆ. ಮ್ಯಾರಥಾನ್ ಓಟದಲ್ಲಿ ಭಾಗಿಯಾಗಿದ್ದ ಕ್ರೀಡಾಪಟು ಕುಸುದುಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಮನ್ ದೀಪ್ ಸಿಂಗ್ ಜಗಡೆ(31) ಮೃತ ದುರ್ದೈವಿ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. 21 ಕಿಲೋಮೀಟರ್‌ ಮ್ಯಾರಥಾನ್ ಓಟದಲ್ಲಿ ಭಾಗಿಯಾಗಿದ್ದ ಅಮನ್​, ನಂದಿಗಿರಿಧಾಮದ ಬೆಟ್ಟದ ಮೇಲೆ ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಮುದ್ದೇನಹಳ್ಳಿಯ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಪ್ರಯೋಜನವಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಮನ್ ದೀಪ್ ಸಿಂಗ್ ಪಂಜಾಬ್​​ ಮೂಲದವರಾಗಿದ್ದು, ಬೆಂಗಳೂರಲ್ಲಿ ನೆಲೆಸಿದ್ದರು. ಮಾನ್ಯತಾ ಟೆಕ್​ ಪಾರ್ಕ್​ನ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.

ಅಮನ್ ದೀಪ್ ಸಿಂಗ್, 21 ಕೀಲೊ ಮೀಟರ್ ಕ್ರಮಿಸಬೇಕಿದ್ದ ನಂದಿ ಹಿಲ್ಸ್​​ ಮಾನ್ಸೂನ್​ ಮ್ಯಾರಥಾನ್​​ನ ಅರ್ಧದಷ್ಟು ಮಾತ್ರ ಓಡಿದ್ದರು ಎನ್ನಲಾಗಿದೆ. ಬೆಂಗಳೂರಿನಲ್ಲಿರುವ ಮೃತನ ಪತ್ನಿ ಆಗಮನಕ್ಕಾಗಿ ಪೊಲೀಸರು ಕಾಯುತ್ತಿದ್ದು, ಮೃತದೇಹ ಸದ್ಯ ಆಸ್ಪತ್ರೆಯಲ್ಲಿಯೇ ಇದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular