ರಾಮನಗರ: ಬಿಡದಿ ಟೌನ್ ಶಿಪ್ ಗೆ ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಗ್ಗಟ್ಟಾಗಿ ಹೋರಾಟ ನಡೆಸುತ್ತಿದ್ದಾರೆ. ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಅಮಿ ನೇತೃತ್ವದಲ್ಲಿ ಜೆಡಿಎಸ್ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ.
ಬಿಡದಿಯ ಬೈರಮಂಗಲದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಪಾದಯಾತ್ರೆಗೆ ಚಾಲನೆ ನೀಡಿದರು. ಇಂದಿನಿಂದ ಮೂರು ದಿನಗಳ ಕಾಲ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಮ್ಮ ಭೂಮಿ ನಮ್ಮ ಹಕ್ಕು ಎಂಬ ಹೆಸರಿನಡಿ ಈ ಪಾದಯಾತ್ರೆ ನಡೆಯಲಿದೆ.
ಜೆಡಿಎಸ್ ಪಾದಯಾತ್ರೆಗೆ ಬಿಜೆಪಿ ನಾಯಕರು ಬೆಂಬಲ ನೀಡಿದ್ದು, ವಿಪಕ್ಷನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಫಲವತ್ತಾದ ಭೂಮಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಬಿಡಲ್ಲ ಎಂದು ಹೋರಾಟಗಾರರು ತಿಳಿಸಿದಾರೆ. ಇಂದು ಬೈರಮಂಗಲದಿಂದ ಆರಂಭವಾಗಿರುವ ಪಾದಯಾತ್ರೆ ಸಂಜೆ ಬಿಡದಿ ತಲುಪಲಿದೆ. ಬಳಿಕ ನಾಳೆ ಪಾದಯಾತ್ರೆ ಮುಂದುವರೆಯಲಿದೆ.

