HomeLatest Newsಬಿಡಡಿ ಟೌನ್ ಶಿಪ್ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ: ಜಮೀನು ನೀಡಲು ಇಷ್ಟವಿಲ್ಲದಿದ್ದರೆ ಒತ್ತಾಯವಿಲ್ಲ...

ಬಿಡಡಿ ಟೌನ್ ಶಿಪ್ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ: ಜಮೀನು ನೀಡಲು ಇಷ್ಟವಿಲ್ಲದಿದ್ದರೆ ಒತ್ತಾಯವಿಲ್ಲ ಎಂದ ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಬಿಡದಿ ಟೌನ್ ಶಿಪ್ ವಿರೋಧಿಸಿ ಒಂದೆಡೆ ರೈತರು ಹೋರಾಟ ನಡೆಸುತ್ತಿದ್ದರೆ ಮತ್ತೊಂದೆಡೆ ಬಿಜೆಪಿ-ಜೆಡಿಎಸ್ ನಾಯಕರು ರೈತರ ಪರ ಇಂದಿನಿಂದ ಮೂರು ದಿನಗಳ ಕಾಲ ಪಾದಯಾತ್ರೆ ಆರಂಭಿಸಿದ್ದಾರೆ. ರೈತರ ಭೂಮಿ ವಶಪಡಿಸಿಕೊಳ್ಳಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. ಈ ಬೆಳವಣಿಗೆ ನಡುವೆಯೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಹತ್ವದ ಸಂದೇಶ ರವಾನಿಸಿದ್ದಾರೆ.

ಭೂಮಿ ನೀಡಲು ಇಷ್ಟವಿಲ್ಲದಿದ್ದರೆ ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ. ಆದರೆ ಬಿಡಡಿ ಟೌನ್ ಶಿಪ್ ನಿರ್ಮಾಣಕ್ಕಾಗಿ ಜಮೀನಿಗೆ ನಾವು ಹಿಂದಿನ ಸರ್ಕಾರಕ್ಕಿಂತ ದುಪ್ಪಟ್ಟು ಹಣ ಪರಿಹಾರವಾಗಿ ನೀಡುತ್ತಿದ್ದೇವೆ. ಭೂಸ್ವಾಧೀನ ಐಚ್ಛಿಕ. ಯಾವುದೇ ಒತ್ತಾಯವಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತು ವಿಡಿಯೋ ಸಂದೇಶ ರವಾನಿಸಿರುವ ಸಿಎಂ ಡಿ.ಕೆ.ಶಿವಕುಮಾರ್, ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್‌ ಯೋಜನೆಗೆ ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಬೃಹತ್ ಯೋಜನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ ಎಂದಿದ್ದಾರೆ.

ರೈತರ ಹಿತರಕ್ಷಣೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಹಿಂದಿನ ಸರ್ಕಾರ ಎಕರೆಗೆ ಕೇವಲ ₹25 ಲಕ್ಷ ನಿಗದಿಪಡಿಸಿದ್ದರೆ, ನಮ್ಮ ಸರ್ಕಾರ ಪ್ರತಿ ಎಕರೆಗೆ ₹3 ಕೋಟಿಗೂ ಹೆಚ್ಚು ಪರಿಹಾರ ನೀಡಲು ತೀರ್ಮಾನಿಸಿದೆ. ಹಣದ ಬದಲಾಗಿ ಭೂಮಿ ಬಯಸುವ ರೈತರಿಗೆ 50% ಅಭಿವೃದ್ಧಿಪಡಿಸಿದ ಜಾಗವನ್ನು ನೀಡಲಾಗುವುದು. ಈ ಭೂಸ್ವಾಧೀನ ಪ್ರಕ್ರಿಯೆಯು ಸಂಪೂರ್ಣವಾಗಿ ಐಚ್ಛಿಕವಾಗಿದ್ದು, ಯೋಜನೆಗೆ ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಯಾವುದೇ ಒತ್ತಾಯವಿರುವುದಿಲ್ಲ. ಯುವಜನತೆಗೆ ಅಪಾರ ಉದ್ಯೋಗಾವಕಾಶ ಸೃಷ್ಟಿಸಿ, ನಮ್ಮ ಅನ್ನದಾತರಿಗೆ ಗೌರವಯುತ ಜೀವನ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಮ್ಮ ಸಹಕಾರವಿರಲಿ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular