HomeKarnatakaಸಚಿವ ಯತೀಂದ್ರ ಸಿದ್ದರಾಮಯ್ಯಗೆ ಮತ್ತೊಂದು ಪ್ರಮುಖ ಜವಾಬ್ದಾರಿ

ಸಚಿವ ಯತೀಂದ್ರ ಸಿದ್ದರಾಮಯ್ಯಗೆ ಮತ್ತೊಂದು ಪ್ರಮುಖ ಜವಾಬ್ದಾರಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿ ವಹಿಸಲು ಸರ್ಕಾರ ಮುಂದಾಗಿದೆ. ಖಾಲಿ ಇರುವ ವಿಧಾನ ಪರಿಷತ್​​ ಸಭಾ ನಾಯಕನ ಸ್ಥಾನವನ್ನು ಯತೀಂದ್ರ ಹೆಗಲಿಗೆ ವಹಿಸುವ ಸಾಧ್ಯತೆ ದಟ್ಟವಾಗಿದೆ.

ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಬೆನ್ನಲ್ಲೇ ಮೇಲ್ಮನೆಯ ಪ್ರಮುಖ ಸ್ಥಾನಗಳೆಲ್ಲವೂ ಖಾಲಿಯಾಗಿವೆ. ಸಭಾಪತಿ, ಉಪಸಭಾಪತಿಯಿಂದ ಹಿಡಿದು ಸಭಾ ನಾಯಕರವರೆಗೂ ಯಾರೂ ಸದ್ಯಕ್ಕಿಲ್ಲ. ನೂತನ ಸಭಾಪತಿಯಾಗಿ ಸಲೀಂ ಅಹ್ಮದ್​​ ಮತ್ತು ಉಪ ಸಭಾಪತಿಯಾಗಿ ಉಮಾಶ್ರೀ ಅವರ ಹೆಸರನ್ನು ಅದಾಗಲೇ ಎಐಸಿಸಿ ಶಿಫಾರಸ್ಸು ಮಾಡಿದ್ದರೂ ಸಭಾ ನಾಯಕ ಯಾರಾಗಾಲಿದ್ದಾರೆ ಎಂಬ ಕುತೂಹಲವಿತ್ತು. ಇದೀಗ ಸಚಿವ ಯತೀಂದ್ರ ಸಿದ್ದರಾಮಯ್ಯಗೆ ಸಭಾನಾಯಕನ ಸ್ಥಾನ ಬಹುತೇಕ ಖಚಿತವಾಗಿದೆ.

ಎಂಎಲ್ಸಿ ಗಾಯತ್ರಿ ಶಾಂತೇಗೌಡ ಸಚಿವ ಸ್ಥಾನವನ್ನು ಹೈಕಮಾಂಡ್ ತಡೆಹಿಡಿದಿರುವ ಕಾರಣ ವಿಧಾನ ಪರಿಷತ್​​ನಿಂದ ಯತೀಂದ್ರ ಸಿದ್ದರಾಮಯ್ಯ ಮಾತ್ರ ಏಕೈಕ ಸಚಿವರಾಗಿದ್ದಾರೆ. ಹೀಗಾಗಿ ಯತೀಂದ್ರಗೆ ಸಭಾ ನಾಯಕ ಸ್ಥಾನ ಸಿಗಬಹುದೆಂಬ ಮಾತುಗಳು ಕೇಳಿಬರುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂಲಕ ಸಚಿವ ಸಂಪುಟ ವಿಸ್ತರಣೆಯಲ್ಲಿ ತಾವು ಸೂಚಿಸಿದ ಕೆಲ ನಾಯಕರ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಮಾಧಾನ ಪಡಿಸುವ ಯತ್ನ ಎನ್ನಲಾಗಿದೆ.

ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎನ್​​​.ಎಸ್.ಬೋಸರಾಜ್ ಅವರು ಸಚಿವರಾಗಿದ್ದರು. ಜೊತೆಗೆ ವಿಧಾನಪರಿಷತ್ ಸಭಾನಾಯಕರಾಗಿದ್ದರು. ಅದರಂತೆ ಇದೀಗ ಯತೀಂದ್ರ ಸಿದ್ದರಾಮಯ್ಯನವರಿಗೆ ಸಭಾನಾಯಕ ಸ್ಥಾನ ಒಲಿಯುವ ಸಾಧ್ಯತೆಯಿದೆ. ಆಗಸ್ಟ್ 13 ರಿಂದ ಮಳೆಗಾಲದ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಪರಿಷತ್ ನಲ್ಲಿ ಆಡಳಿತ ಪಕ್ಷವನ್ನು ಯತೀಂದ್ರ ಮುನ್ನಡೆಸಲಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular