HomeLive Newsಹೈಕೋರ್ಟ್‌ನ 6 ನೂತನ ಹೆಚ್ಚುವರಿ ನ್ಯಾಯಾಧೀಶರಿಂದ ಪ್ರಮಾಣ ವಚನ ಸ್ವೀಕಾರ

ಹೈಕೋರ್ಟ್‌ನ 6 ನೂತನ ಹೆಚ್ಚುವರಿ ನ್ಯಾಯಾಧೀಶರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ 6 ಜನರುನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನ್ಯಾಯಮೂರ್ತಿಗಳಾಗಿ ರಾಘವೇಂದ್ರ ಸೀತಾರಾಂ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್ ಮತ್ತು ಹೊಂಬೇಗೌಡ ಶಾಂತಿ ಭೂಷಣ್ ಅವರು ಪದಗ್ರಹಣ ಮಾಡಿದ್ದಾರೆ.

ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಬು ಭಖ್ರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಹೈಕೋರ್ಟ್ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular