ಭಾರತ ರಕ್ಷಣಾ ಸಚಿವಾಲಯದ ವ್ಯಾಪ್ತಿಯಲ್ಲಿರುವ ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ (AOC) ನಿರುದ್ಯೋಗಿ ಯುವಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ದೇಶಾದ್ಯಂತ ವಿವಿಧ ಆರ್ಮಿ ಡಿಪೋಗಳು ಮತ್ತು ಘಟಕಗಳಲ್ಲಿ ಖಾಲಿ ಇರುವ ಗ್ರೂಪ್-ಸಿ ಸಿವಿಲಿಯನ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಬೃಹತ್ ಅಧಿಸೂಚನೆ ಹೊರಡಿಸಿದೆ.
ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಬೇಕು ಎಂಬ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. 10ನೇ ತರಗತಿ ಪಾಸಾದವರಿಂದ ಪದವಿ ಪೂರ್ಣಗೊಳಿಸಿದವರವರೆಗೆ ವಿವಿಧ ವಿಭಾಗಗಳಲ್ಲಿ ಒಟ್ಟು 2,615 ಹುದ್ದೆಗಳನ್ನು ಈ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ.
ವಿಭಾಗವಾರು ಖಾಲಿ ಹುದ್ದೆಗಳ ವಿವರ
ಈ ಅಧಿಸೂಚನೆಯ ಮೂಲಕ ವಿವಿಧ ರೀತಿಯ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದರಲ್ಲಿ ಅತಿ ಹೆಚ್ಚು ಟ್ರೇಡ್ಸ್‌ಮ್ಯಾನ್ ಮೇಟ್ ವಿಭಾಗದಲ್ಲಿ 1,799 ಹುದ್ದೆಗಳು ಖಾಲಿ ಇವೆ.ಇದರ ಜೊತೆಗೆ ಫೈರ್‌ಮ್ಯಾನ್ – 520, ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) – 142, ಜೂನಿಯರ್ ಆಫೀಸ್ ಅಸಿಸ್ಟೆಂಟ್ (JOA) – 104, ಮೆಟೀರಿಯಲ್ ಅಸಿಸ್ಟೆಂಟ್ – 50 ಹುದ್ದೆಗಳು ಲಭ್ಯವಿವೆ.
ಹುದ್ದೆಗೆ ಅನುಗುಣವಾಗಿ ವಿದ್ಯಾರ್ಹತೆ
ಹುದ್ದೆಗೆ ಅನುಗುಣವಾಗಿ 10ನೇ ತರಗತಿ, ಪಿಯುಸಿ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.ಜೂನಿಯರ್ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಕಂಪ್ಯೂಟರ್ ಟೈಪಿಂಗ್ ಜ್ಞಾನ ಕಡ್ಡಾಯವಾಗಿದೆ.
ಆಯ್ಕೆ ಪ್ರಕ್ರಿಯೆ ಮತ್ತು ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ (PET – ಹುದ್ದೆಗೆ ಅನುಗುಣವಾಗಿ), ಟೈಪಿಂಗ್ ಟೆಸ್ಟ್, ಪ್ರಮಾಣಪತ್ರಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ.ಆಸಕ್ತ ಅಭ್ಯರ್ಥಿಗಳು ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ವಿದ್ಯಾರ್ಹತೆ, ವಯೋಮಿತಿ, ವೇತನ ಮತ್ತು ಇತರ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ aocrecruitment.gov.in ಅನ್ನು ಪರಿಶೀಲಿಸಬಹುದು.

