HomeKarnatakaBREAKING: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್: ಓರ್ವ ಸಾವು; ಹಲವರ ಸ್ಥಿತಿ ಗಂಭೀರ

BREAKING: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್: ಓರ್ವ ಸಾವು; ಹಲವರ ಸ್ಥಿತಿ ಗಂಭೀರ

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಹೊಲವಲಯದಲ್ಲಿ ನಡೆದಿದೆ.

ಹಾವೇರಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ. ಚಾವರ ಸಿಂಗ್ ರಜಪೂತ್ (18) ಮೃತ ಯುವಕ.

ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದು ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಹಾವೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular