ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಕಂಡು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ.
ಚಾಮುಂಡಿ ಬೆಟ್ಟದ ನಾಯಕನಕೆರೆ ಬೀದಿ ಮಾರಮ್ಮ ದೇವಸ್ಥಾನದ ಬಳಿ ಚಿರತೆ ಓಡಾಟ ನಡೆಸಿದೆ. ಚಿರತೆ ನೋಡಿದ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಚಿರತೆ ಪ್ರತ್ಯಕ್ಷವಾಗಿರುವುದನ್ನು ಕಂಡು ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.
ಸ್ಥಳದಲ್ಲಿ ಬೋನ್ ಇರಿಸಿ ಚಿರತೆ ಸೆರೆ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮುಂದಾಗಿದ್ದಾರೆ. ಸಿಸಿ ಕ್ಯಾಮರಾ ಮೂಲಕ ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಲಾಗಿದೆ.

