HomeLatest Newsಸ್ಲಮ್‌ಡಾಗ್ ಚಿತ್ರದಿಂದ ಹೊರಬಿತ್ತು ಟಬು ಖಡಕ್ ಝಲಕ್: ಇನ್‌ಕಮ್ ಟ್ಯಾಕ್ಸ್ ಅಧಿಕಾರಿಯಾಗಿ ನಟಿಯ ಅಬ್ಬರ!

ಸ್ಲಮ್‌ಡಾಗ್ ಚಿತ್ರದಿಂದ ಹೊರಬಿತ್ತು ಟಬು ಖಡಕ್ ಝಲಕ್: ಇನ್‌ಕಮ್ ಟ್ಯಾಕ್ಸ್ ಅಧಿಕಾರಿಯಾಗಿ ನಟಿಯ ಅಬ್ಬರ!

ಸ್ಟಾರ್ ನಟ ವಿಜಯ್ ಸೇತುಪತಿ ಹಾಗೂ ಖ್ಯಾತ ನಿರ್ದೇಶಕ ಪೂರಿ ಜಗನ್ನಾಥ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ಸ್ಲಮ್‌ಡಾಗ್: 33 ಟೆಂಪಲ್ ರೋಡ್’ ಸಿನಿಮಾದ ಬಗ್ಗೆ ಮತ್ತೊಂದು ದೊಡ್ಡ ಮಾಹಿತಿ ಹೊರಬಿದ್ದಿದೆ. ಈ ಬಹುನಿರೀಕ್ಷಿತ ಚಿತ್ರದಲ್ಲಿ ಬಾಲಿವುಡ್ ನಟಿ ಟಬು ಅಭಿನಯಿಸುತ್ತಿರುವುದು ಈಗಾಗಲೇ ತಿಳಿದ ವಿಚಾರ. ಇದೀಗ ಚಿತ್ರತಂಡ ಅವರ ಪಾತ್ರದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ.

ಈ ಚಿತ್ರದಲ್ಲಿ ಟಬು ಅವರು ಗೌರಿ ಹೆಗ್ಡೆ ಎಂಬ ಹೆಸರಿನ ಇನ್‌ಕಮ್ ಟ್ಯಾಕ್ಸ್ ಡೆಪ್ಯುಟಿ ಕಮಿಷನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆಯಾಗಿರುವ ಝಲಕ್‌ನಲ್ಲಿ ಅವರು ಅತ್ಯಂತ ಧೈರ್ಯಶಾಲಿ, ಭ್ರಷ್ಟರ ಪಾಲಿಗೆ ಸಿಂಹಸ್ವಪ್ನವಾದ ಮತ್ತು ರಫ್ ಅಂಡ್ ಟಫ್ ಅಧಿಕಾರಿಯಾಗಿ ಮಿಂಚಿದ್ದಾರೆ. ಮಾಸ್ ಆಕ್ಷನ್ ಅವತಾರದಲ್ಲಿ ಕಾಣಿಸಿಕೊಂಡಿರುವ ಟಬು, ಈ ತೆಲುಗು ಸಿನಿಮಾಗೆ ಸ್ವತಃ ತಾವೇ ಡಬ್ಬಿಂಗ್ ಮಾಡಿರುವುದು ವಿಶೇಷ.

ವಿಜಯ್ ಸೇತುಪತಿ ಮತ್ತು ಟಬು ಕಾಂಬಿನೇಷನ್ ತೆರೆಮೇಲೆ ಹೇಗಿರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಚಿತ್ರದಲ್ಲಿ ಸಂಯುಕ್ತ, ದುನಿಯಾ ವಿಜಯ್, ಬ್ರಹ್ಮಾಜಿ ಹಾಗೂ ವಿಟಿವಿ ಗಣೇಶ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಪೂರಿ ಜಗನ್ನಾಥ್, ಚಾರ್ಮಿ ಕೌರ್ ಮತ್ತು ಜೆಬಿ ನಾರಾಯಣ ರಾವ್ ಕೊಂಡ್ರೊಲ್ಲ ಜಂಟಿಯಾಗಿ ಈ ಬಿಗ್ ಬಜೆಟ್ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹರ್ಷವರ್ಧನ್ ರಾಮೇಶ್ವರ್ ಸಂಗೀತ ನಿರ್ದೇಶನವಿರುವ ಈ ಬಹುಭಾಷಾ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular