HomeKarnatakaಹೈಕಮಾಂಡ್ ಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರಾ ನಾಗೇಂದ್ರ? ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಹೈಕಮಾಂಡ್ ಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರಾ ನಾಗೇಂದ್ರ? ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾಗಿರುವ ನೂರಾರು ಕೋಟಿ ಲೂಟಿ ಮಾಡಿರುವ ಆರೋಪ ಎದುರಿಸುತ್ತಿರುವ ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದು ಸರಿಯಲ್ಲ. ಕೂಡಲೇ ಅವರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ನಾಗೇಂದ್ರ ವಿರುದ್ಧ ಒಂದೆರಡಲ್ಲ, ನೂರಾರು ಕೋಟಿ ಲೂಟು ಮಾಡಿರುವ ಆರೋಪವಿದೆ. ಅಂತಹ ಭ್ರಷ್ಟರಿಗೆ ಸಚಿವ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಭ್ರಷ್ಟರ ಪರವಾಗಿದೆ ಎಂಬುದನ್ನು ಸಾಬೀತು ಮಾಡಿದೆ ಎಂದರು.

ನಾಗೇಂದ್ರ ಅವರು ಹೈಕಮಾಂಡ್ ನ್ನೇ ಬ್ಲ್ಯಾಕ್ ಮೇಲ್ ಮಾಡಿದ್ದಾರಾ? ಸತ್ಯ ಬತಲು ಮಾಡುತ್ತೇನೆ ಎಂದಿದ್ದಾರಾ? ಹಾಗಾಗಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಾರಾ? ಕೋರ್ಟ್ ಕ್ಲಿನ್ ಚಿಟ್ ಬಗ್ಗೆ ತೀರ್ಪು ನೀಡುವ ಮುನ್ನವೇ ಕಾಂಗ್ರೆಸ್ ನವರು ಆರೋಪಿಗೆ ಸಚಿವ ಸ್ಥಾನ ನೀಡಿದ್ದು ಖಂಡನೀಯ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದು ಪರಿಶಿಷ್ಟ ಪಂಗಡದವರಿಗೆ ಮಾಡಿರುವ ದ್ರೋಹ. ಅವರ ದುಡ್ಡು ತಿಂದಿರುವ ಆರೋಪ ಹೊತ್ತಿವ ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು. ಅವರು ರಾಜೀನಾಮೆ ಕೊಡಲೇಬೇಕು. ಈ ನಿಟ್ಟಿನಲ್ಲಿ ನಾವು ಸದನದ ಒಳಗೆ ಹಾಗೂ ಹೊರಗೆ ಹೋರಾಡುತ್ತೇವೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular