HomeKarnatakaBREAKING: ಸಚಿವ ನಾಗೇಂದ್ರಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

BREAKING: ಸಚಿವ ನಾಗೇಂದ್ರಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಸಚಿವ ಬಿ.ನಾಗೇಂದ್ರಗೆ ಕರ್ನಾಟಕ ಬಿಟ್ಟು ಬೇರೆ ರಾಜ್ಯಗಳಿಗೆ ತೆರಳಬಾರದು ಎಂಬ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ನಾಗೇಂದ್ರ ಅವರಿಗೆ ಅನುಮತಿಯಿಲ್ಲದೆ ರಾಜ್ಯಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ತಿಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ದೆಹಲಿಗೆ ತೆರಳಲು ಅನುಮತಿ ಕೋರಿದ್ದ ಬಿ.ನಾಗೇಂದ್ರ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ನಾಗೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಗೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಬಿಟ್ಟು ತೆರಳದಂತೆ ಇದ್ದ ಷರತ್ತಿಗೆ ತಡೆ ನಿಡಿದ್ದು, ಕೋರ್ಟ್ ಅನುಮತಿ ಇಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲವೆಂದು ಷರತ್ತು ಮಾರ್ಪಾಡು ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಆ.12ರವರೆಗೆ ಕಾಲಾವಕಾಶ ನೀಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆರೋಪದಲ್ಲಿ ಜೈಲು ಸೇರಿದ್ದ ನಾಗೇಂದ್ರ ಜಾಮೀನು ಪಡೆದು ಹೊರಗಿದ್ದು, ಇದೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿದ್ದಾರೆ. ನಾಗೇಂದ್ರ ಇಡಿ ತನಿಖೆ ಎದುರಿಸುತ್ತಿದ್ದಾರೆ. ಆದ್ರೆ ಕೋರ್ಟ್ ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿಗೆ ಭೇಟಿ ನೀಡಿದ್ದಾರೆ. ಅನುಮತಿಯನ್ನೇ ಪಡೆಯದೆ ನಾಗೇಂದ್ರ ಅವರು ಕಳೆದ ಜುಲೈ 17ರಂದು ದೆಹಲಿಗೆ ಹೋಗಿದ್ದರ ಮಾಹಿತಿ ಲಭ್ಯವಾಗಿತ್ತು. ಸಂಬಂಧ ವಿಪಕ್ಷ ಬಿಜೆಪಿ ನಾಯಕರು ನಾಗೇಂದ್ರ ವಿರುದ್ಧ ಕಿಡಿಕಾರಿದ್ದರು. ಕೋರ್ಟ್ ಷರತ್ತು ಉಲ್ಲಂಘಿಸಿದ ನಾಗೇಂದ್ರರನ್ನು ಕ್ಯಾಬಿನೆಟ್​​​​ನಿಂದ ವಜಾ ಮಾಡುವಂತೆ ಆಗ್ರಹಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಕೋರ್ಟ್ ಷರತ್ತು ಆದೇಶವನ್ನು ಮಾರ್ಪಡಿಸಿದೆ. ಬೇರೆ ರಾಜ್ಯಗಳಿಗೆ ತೆರಳಲು ಅನುಮತಿ ನೀಡಿದೆ. ಆದರೆ ಅನುಮತಿ ಇಲ್ಲದೇ ದೇಶ ಬಿಟ್ಟು ಹೋಗುವಂತಿಲ್ಲ ಎಂದು ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular