HomeKarnatakaBREAKING: ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ ಯತ್ನ

BREAKING: ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ ಯತ್ನ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯ ತಾಜ್ ಹೋಟೆಲ್ ನ ನಾಲ್ಕನೇ ಮಹಡಿಯಲ್ಲಿ ಘಟನೆ ನಡೆದಿದೆ. ಶೇಖ್ ಜೋಯಾ(10), ಶೇಖದ್ ಜಿಹಾರಾ(5) ಕೊಲೆಯಾದವರು ಎಂದು ಗುರುತಿಸಲಾಗಿದೆ.

ಅವರನ್ನು ಹತ್ಯೆ ಮಾಡಿದ ಇಮ್ರಾನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕತ್ತು ಕೊಯ್ದುಕೊಂಡು ಇಮ್ರಾನ್ ಆತ್ಮಹತ್ಯೆಗೆ ಯತ್ನಿಸಿದ್ದು, ಆತನ ಚೀರಾಟ ಕೇಳಿದ ಸೆಕ್ಯೂರಿಟಿ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಕೂಡಲೇ ಇಮ್ರಾನ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೊಲೆ ಮತ್ತು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತಾಜ್ ಹೋಟೆಲ್ ನ ನಾಲ್ಕನೇ ಮಹಡಿಯಲ್ಲಿ ಘಟನೆ ನಡೆದಿದೆ. ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಇಮ್ರಾನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಏರ್ಪೋರ್ಟ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

(ಹಕ್ಕುತ್ಯಾಗ: ಈ ಲೇಖನವು ಯಾವುದೇ ರೂಪದಲ್ಲಿ ಸ್ವಯಂ-ಹಾನಿ ಅಥವಾ ಆತ್ಮಹತ್ಯೆಯನ್ನು ಉತ್ತೇಜಿಸಲು, ಪ್ರೋತ್ಸಾಹಿಸಲು ಅಥವಾ ಸಂವೇದನಾಶೀಲಗೊಳಿಸಲು ಉದ್ದೇಶಿಸಿಲ್ಲ. ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಭಾವನಾತ್ಮಕ ಯಾತನೆ, ಆತ್ಮಹತ್ಯಾ ಆಲೋಚನೆಗಳು ಅಥವಾ ಮಾನಸಿಕ ಆರೋಗ್ಯ ಬಿಕ್ಕಟ್ಟನ್ನು ಅನುಭವಿಸುತ್ತಿದ್ದರೆ, ದಯವಿಟ್ಟು ತಕ್ಷಣದ ವೃತ್ತಿಪರ ಸಹಾಯವನ್ನು ಪಡೆಯಿರಿ. ಭಾರತದಲ್ಲಿ, ನೀವು AASRA (24/7) ಅನ್ನು ಸಂಪರ್ಕಿಸಬಹುದು: 91-9820466726 ಅಥವಾ ವಿಶ್ವಾಸಾರ್ಹ ಮಾನಸಿಕ ಆರೋಗ್ಯ ವೃತ್ತಿಪರರು, ವೈದ್ಯರು ಅಥವಾ ಸ್ಥಳೀಯ ತುರ್ತು ಸೇವೆಗಳನ್ನು ಸಂಪರ್ಕಿಸಬಹುದು.)

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular