HomeKarnatakaರೇಣುಕಾಸ್ವಾಮಿ ಹತ್ಯೆ ಕೇಸ್: ಮಾಫಿ ಸಾಕ್ಷಿ ಕೋರಿ ಅರ್ಜಿ ಸಲ್ಲಿಸಿದ್ದ ಪ್ರದೋಷ್ ಕುರಿತ ಆದೇಶ ನಾಳೆಗೆ...

ರೇಣುಕಾಸ್ವಾಮಿ ಹತ್ಯೆ ಕೇಸ್: ಮಾಫಿ ಸಾಕ್ಷಿ ಕೋರಿ ಅರ್ಜಿ ಸಲ್ಲಿಸಿದ್ದ ಪ್ರದೋಷ್ ಕುರಿತ ಆದೇಶ ನಾಳೆಗೆ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಫಿ ಸಾಕ್ಷಿಯನ್ನಾಗಿ 14ನೇ ಆರೋಪಿ ಪ್ರದೂಷ್ ಸಲ್ಲಿಸಿದ್ದ ಅರ್ಜಿ ಕುರಿತ ವಿಚಾರಣೆ ಮುಕ್ತಾಯವಾಗಿದ್ದು, ಕೋರ್ಟ್ ಆದೇಶ ಕಾಯ್ದಿರಿಸಿದೆ.

ಆರೋಪಿ ಪ್ರದೋಷ್ ಜೊತೆಗೆ ಸಹ ಆರೋಪಿಗಳು ತಮ್ಮ ವಾದ ಆಲಿಸಬೇಕೆಂದು ಮಾಡಿದ್ದ ಮನವಿಯನ್ನ 59ನೇ ಸಿಸಿಎಚ್ ನ್ಯಾಯಾಲಯ ತಿರಸ್ಕರಿಸಿದೆ. ಮಾಫಿ ಸಾಕ್ಷಿಯಾಗಿ ಪ್ರದೂಷ್ ನನ್ನ ಪರಿಗಣಿಸಬೇಕು ಅಥವಾ ಬೇಡವೋ ಎಂಬುದರ ಕುರಿತು ನಾಳೆಗೆ ಆದೇಶ ಕಾಯ್ದಿರಿಸಿದೆ.

ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್, ಸಂಪೂರ್ಣ ಸತ್ಯ ಬಹಿರಂಗ ಪಡಿಸುತ್ತೇನೆ. ತನ್ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಬೇಕೆಂದು ಕೋರಿ ಗುರುವಾರ ಅರ್ಜಿ ಸಲ್ಲಿಸಿದ್ದರು. ಈತನೊಂದಿಗೆ 8ನೇ ಆರೋಪಿ ರವಿಶಂಕರ್ ಹಾಗೂ 10ನೇ ಆರೋಪಿ ವಿನಯ್ ಸಹ ಅರ್ಜಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ಸಹ ಪ್ರದೂಷ್ ನನ್ನ ಮಾಫಿ ಸಾಕ್ಷಿಯಾಗಿಸಲು ಒಪ್ಪಿಗೆ ಸೂಚಿಸಿತ್ತು. ಇದಕ್ಕೆ ದರ್ಶನ್ ಪರ ವಕೀಲರು ಆಕ್ಷೇಪಿಸಿ ತಮ್ಮ ವಾದ ಆಲಿಸಬೇಕೆಂದು ಕೋರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ ಇಂದಿಗೆ ಆದೇಶ ಕಾಯ್ದಿರಿಸಿತ್ತು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯವು, ಮಾಫಿ ಸಾಕ್ಷಿ ಕುರಿತಂತೆ ಇತರೆ ಆರೋಪಿಗಳ ವಾದ ಆಲಿಸಬೇಕೆಂಬ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಸಹ ಆರೋಪಿಗಳ ಮನವಿಯನ್ನು ತಿರಸ್ಕರಿಸಿದೆ. ಪ್ರದೂಷ್ ನ ಮಾಫಿ ಸಾಕ್ಷಿ ಕುರಿತ ಆದೇಶವನ್ನು ನಾಳೆಗೆ ಕಾಯ್ದಿರಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular