HomeKarnatakaಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಸದಸ್ಯರಿಗೆ 10 ಕೆಜಿ ಆಹಾರಧಾನ್ಯ ವಿತರಣೆ

ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಸದಸ್ಯರಿಗೆ 10 ಕೆಜಿ ಆಹಾರಧಾನ್ಯ ವಿತರಣೆ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಬೆಂಗಳೂರು ಅನೌಪಚಾರಿಕ ಪಡಿತರ ಪ್ರದೇಶ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರವನ್ನು ಒಂದೇ ಬಾರಿಗೆ ಪ್ರಸಕ್ತ ತಿಂಗಳಲ್ಲಿ ಕಾರ್ಡ್ ದಾರರಿಗೆ ವಿತರಿಸಲಾಗುವುದು.

ಅಂತ್ಯೋದಯ ಕಾರ್ಡ್ ನ ಪ್ರತಿ ಕುಟುಂಬಕ್ಕೆ 42 ಕೆಜಿ ರಾಗಿ, 28 ಕೆಜಿ ಅಕ್ಕಿ ಸೇರಿ 70 ಕೆಜಿ ಪಡಿತರ ನೀಡಲಾಗುವುದು. ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಸದಸ್ಯನಿಗೆ 6 ಕೆಜಿ ರಾಗಿ, 4 ಕೆಜಿ ಅಕ್ಕಿ ನೀಡಲಾಗುವುದು. ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತ್ಯೇಕವಾಗಿ ಎರಡು ಬಾರಿ ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯವಾಗಿದೆ.

ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರ ಒಂದೇ ಬಾರಿಗೆ ಪ್ರಸಕ್ತ ತಿಂಗಳಲ್ಲಿ ಕಾರ್ಡ್ ದಾರರಿಗೆ ವಿತರಣೆ ಮಾಡಲಾಗುವುದು. ಬೆಂಗಳೂರು ಅನೌಪಚಾರಿಕ ಪಡಿತರ ಪ್ರದೇಶ ವ್ಯಾಪ್ತಿಯಲ್ಲಿ ಪಡಿತರ ವಿತರಣೆಯಲ್ಲಿ ಯಾವುದೇ ಲೋಪ, ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪಡಿತರ ನೀಡುವುದು, ಹೆಚ್ಚುವರಿ ಹಣ ವಸೂಲಿ ಮಾಡುವುದು ಅಥವಾ ಇತರೆ ಅಕ್ರಮಗಳು ಕಂಡು ಬಂದಲ್ಲಿ ಸಾರ್ವಜನಿಕರು ಆಹಾರ ಇಲಾಖೆಯ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಹೆಚ್ಚುವರಿ ನಿರ್ದೇಶಕ ವಿ. ಪಾತರಾಜು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular