ಶಿವಮೊಗ್ಗ: ಶಾಲೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ೮ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಾಚೇನಹಳ್ಳಿಯಲ್ಲಿ ನಡೆದಿದೆ.
ಇಲ್ಲಿನ ಕಿವುಡ ಹಾಗೂ ಮೂಗರ ವಸತಿ ಶಾಲೆಯಲ್ಲಿ ಈ ದುರಂತ ಸಂಭವಿಸಿದೆ. ಶಿಕಾರಿಪುರ ತಾಲೂಕಿನ ಅಣ್ಣಪ್ಪನಹಟ್ಟಿ ಗ್ರಾಮದ ಅಕ್ಷರಾ (14) ಮೃತ ವಿದ್ಯಾರ್ಥಿನಿ. ಶಾಲೆಯಲ್ಲಿ ಏಕಾಏಕಿ ತಲೆ ತಿರುಗಿ ಬಂದು ಕುಸಿದು ಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಅಕ್ಷರಾ ಮೃತಪಟ್ಟಿದ್ದಾಳೆ.
ಆಗಸ್ಟ್ 7ರಂದು ಪೋಷಕರು ಅಕ್ಷರಾಳನ್ನು ವಸತಿ ಶಾಲೆಗೆ ಸೇರಿಸಿದ್ದರು. ಆದರೆ ಏಕಾಏಕಿ ಬಾಲಕಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಮಗಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

