HomeKarnatakaರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಹಾಕಿದ್ದರ ಹಿಂದೆ ಪ್ರಭಾವಿ ಮಹಿಳೆ ಕೈವಾಡ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಹಾಕಿದ್ದರ ಹಿಂದೆ ಪ್ರಭಾವಿ ಮಹಿಳೆ ಕೈವಾಡ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯದ (FSL) ವರದಿ ಹೊರ ಬಿದ್ದಿದ್ದು, ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ಕೊಲೆ ಪ್ರಕರಣದ 49ನೇ ಸಾಕ್ಷಿ ಸಂದೀಪ್‌ ನನ್ನು ಕಿಡ್ನಾಪ್ ಮಾಡಿ ಜೀವ ಬೆದರಿಕೆ ಹಾಕಿದ ಕೃತ್ಯದ ಹಿಂದೆ ಪ್ರಭಾವಿ ಮಹಿಳೆಯೊಬ್ಬರ ಕೃತ್ಯವಿರುವುದು ಹಾಗೂ ಮಾಸ್ಟರ್ ಪ್ಲಾನ್ ನಡೆದಿರುವುದು ತಾಂತ್ರಿಕ ತನಿಖೆಯಲ್ಲಿ ಸಾಬೀತಾಗಿದೆ.

ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಹಾಗೂ ನಟ ದರ್ಶನ್‌ ಕುಟುಂಬಕ್ಕೆ ಅತ್ಯಾಪ್ತನಾಗಿದ್ದ ಪುನೀತ್ ಎಂಬಾತನ ಮೂಲಕ ಸಾಕ್ಷಿ ಸಂದೀಪ್‌ಗೆ ಬೆದರಿಕೆ ಹಾಕಿಸಲಾಗಿತ್ತು. ಅಪಹರಣ ಮತ್ತು ಬೆದರಿಕೆ ಕೃತ್ಯ ನಡೆಯುತ್ತಿದ್ದ ಸಮಯದಲ್ಲಿ ಪುನೀತ್, ಕಿರಣ್ ಹಾಗೂ ಗೌರವ್ ಶೆಟ್ಟಿ ಮೂವರೂ ವಾಟ್ಸಪ್ ಕಾನ್ಫರೆನ್ಸ್ ಕಾಲ್‌ನಲ್ಲಿದ್ದರು. ಕಾಲ್‌ನಲ್ಲಿದ್ದುಕೊಂಡೇ ಕಿರಣ್ ಮತ್ತು ಗೌರವ್ ಶೆಟ್ಟಿ, ಸಾಕ್ಷಿಯನ್ನು ಹೇಗೆ ಹೆದರಿಸಬೇಕು ಎಂಬುದರ ಕುರಿತು ಪುನೀತ್ ಆಂಡ್ ಟೀಮ್‌ಗೆ ಹಂತ ಹಂತವಾಗಿ ಮಾರ್ಗದರ್ಶನ ನೀಡುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಫ್‌ಎಸ್‌ಎಲ್ ವರದಿಯ ಪ್ರಕಾರ, ಈ ಕೃತ್ಯ ನಡೆಯುವ ಮುನ್ನ ಪುನೀತ್‌ಗೆ ಪ್ರಭಾವಿ ಮಹಿಳೆಯೊಬ್ಬರಿಂದ ಕರೆ ಬಂದಿತ್ತು. ಗೌರವ್ ಶೆಟ್ಟಿ ಏನು ಹೇಳುತ್ತಾನೋ ಅದನ್ನು ಚಾಚೂ ತಪ್ಪದೇ ಮಾಡು ಎಂದು ಆ ಪ್ರಭಾವಿ ಮಹಿಳೆ ಪುನೀತ್‌ಗೆ ಸೂಚನೆ ನೀಡಿದ್ದಳು ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular