HomeLatest NewsBREAKING: ಗಾಯದ ಮೇಲೆ ಬರೆ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ CWRC ಆದೇಶ ಬೆನ್ನಲೇ...

BREAKING: ಗಾಯದ ಮೇಲೆ ಬರೆ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ CWRC ಆದೇಶ ಬೆನ್ನಲೇ ಮಂಡ್ಯದಲ್ಲಿ ಭುಗಿಲೆದ್ದ ರೈತರ ಆಕ್ರೋಶ

ಮಂಡ್ಯ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಆದೇಶ ನೀಡುತ್ತಿದ್ದಂತೆ ಕಾವೇರಿ ಕೊಳ್ಳ, ಮಂಡ್ಯ ಭಾಗದಲ್ಲಿ ರೈತರು ಪ್ರತಿಭಟನೆ ಪ್ರಾರಂಭಿಸಿದ್ದು, ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ನಡೆದ CWRC ಸಭೆಯಲ್ಲಿ ಕರ್ನಾಟಕ ಮತ್ತೆ ತಮಿಳುನಾಡಿಗೆ ಪ್ರತಿ ದಿನ 12,000 ಕ್ಯೂಸೆಕ್ ನೀರಿನಂತೆ 15 ದಿನಗಳ ಕಾಲ ನೀರು ಬಿಡುವಂತೆ ಸೂಚಿಸಲಾಗಿದೆ. ಈ ಆದೇಶಕ್ಕೆ ರಾಜ್ಯದ ಅಧಿಕಾರಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ CWRC ನೀರು ಬಿಡಲೇಬೇಕು ಎಂದು ಶಿಫಾರಸು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

CWRC ಆದೇಶ ಹೊರ ಬೀಳುತ್ತಿದ್ದಂತೆ ಮಂಡ್ಯದ ಸಂಜಯ್ ವೃತ್ತದಲ್ಲಿ ಸೇರಿರುವ ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು CWRC ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಮಗೆ ಮಳೆ ಕೊರತೆಯಿದೆ. ಈಗ ಸಂಗ್ರಹವಾಗಿರುವ ನೀರು ಕುಡಿಯುವ ನೀರಿಗೂ ಸಾಲುವುದಿಲ್ಲ. ಇನ್ನೂ ಕೆ.ಆರ್.ಎಸ್ ಜಲಾಶಯವೇ ಭರ್ತಿಯಾಗಿಲ್ಲ. ಇಂತಹ ಸಂದರ್ಭದಲ್ಲಿ ಪ್ರತಿದಿನ 12,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಆದೇಶ ನೀಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದು ಅವೈಜ್ಞಾನಿಕ ಆದೇಶವಾಗಿದ್ದು, ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ನೀರು ಬಿಡಬಾರದು ಎಂದು ಆಗ್ರಹಿಸಿದರು.

ಸಂಜಯ ವೃತ್ತದಲ್ಲಿ ರಸ್ತೆ ತ್ಯಡೆ ನಡೆಸಿದ ರೈತರು, ರಸ್ತೆ ಮಧ್ಯೆಯೇ ಕುಳಿತು, ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. CWRC ತನ್ನ ಆದೇಶ ಹಿಂಪಡೆದು ಕರ್ನಾಟಕ ರೈತರ ಹಿತರಕ್ಷಣೆ ದೃಷ್ಟಿಯಿದಲೂ ಯೋಚಿಸಬೇಕು ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular