ಕಲ್ಕತ್ತಾ ಹೈಕೋರ್ಟ್ ನೀಡಿದ ಕಟ್ಟುನಿಟ್ಟಿನ ಆದೇಶದ ಬೆನ್ನಲ್ಲೇ ದೆಹಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಹಾಗೂ ಬಂಗಾಳ ಕ್ರಿಕೆಟರ್ ಅಭಿಷೇಕ್ ಪೊರೆಲ್ ಅವರನ್ನು ಹುಗ್ಳಿ ಜಿಲ್ಲೆಯಲ್ಲಿ ಪೋಲಿಸರು ಬಂಧಿಸಿದ್ದಾರೆ. ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪಶ್ಚಿಮ ಬಂಗಾಳದ ಮೊಗ್ರಾ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಬಂಧಿತ ಆಟಗಾರ ಮದುವೆಯಾಗುವುದಾಗಿ ನಂಬಿಸಿ ಸುಮಾರು ಮೂರು ವರ್ಷಗಳಿಂದ ದೈಹಿಕ ಸಂಬಂಧ ಹೊಂದಿದ್ದು, ಆನಂತರ ವಂಚಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ತೀವ್ರತೆಯನ್ನು ಪರಿಗಣಿಸಿದ ಕಲ್ಕತ್ತಾ ಹೈಕೋರ್ಟ್, ಆರೋಪಿಯನ್ನು ತಕ್ಷಣವೇ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.
ಪೋಲಿಸರು ಅಭಿಷೇಕ್ ಪೊರೆಲ್ ವಿರುದ್ಧ ಜಾಮೀನು ರಹಿತ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ತನಿಖೆಯ ಭಾಗವಾಗಿ ಅವರ ಮೊಬೈಲ್ ಫೋನ್ ಸೇರಿದಂತೆ ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಕ್ಕೆ ಪಡೆಯಲು ನಿರ್ಧರಿಸಲಾಗಿದೆ. ಇಬ್ಬರ ನಡುವೆ ಕಳೆದ ಒಂದೂವರೆ ವರ್ಷದಿಂದ ಭಿನ್ನಾಭಿಪ್ರಾಯಗಳು ಮೂಡಿದ್ದವು ಎಂದು ತಿಳಿದುಬಂದಿದೆ. ಸದ್ಯ ಕ್ರೀಡಾ ಲೋಕದಲ್ಲಿ ಈ ಬಂಧನ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.
Bengal and Delhi Capitals wicketkeeper Abhishek Porel has been arrested in Hooghly over allegations of r@pe. The arrest comes following a complaint by a medical student.
— Rahul Rawat (@rawatrahul9) August 11, 2026

