HomeKarnatakaರಾಜ್ಯದಲ್ಲಿ ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯದಲ್ಲಿ ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕರ್ನಾಟಕ ಸರ್ಕಾರವು ಬುಧವಾರ (ಆಗಸ್ಟ್ 12) ಮೂವರು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಹೆಚ್ಚುವರಿ ಹೊಣೆಗಾರಿಕೆ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಪ್ರಮುಖವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA), ಕರ್ನಾಟಕ ಲೋಕಸೇವಾ ಆಯೋಗ (KPSC) ಹಾಗೂ ಪಂಚಾಯತ್ ರಾಜ್ ಇಲಾಖೆಗಳಲ್ಲಿ ಆಡಳಿತಾತ್ಮಕ ಪುನರ್‌ರಚನೆ ಮಾಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಹೊರಡಿಸಿರುವ ಈ ಆದೇಶವು ಕೆಪಿಎಸ್‌ಸಿ ಪರೀಕ್ಷೆಗಳ ನಿರೀಕ್ಷೆಯಲ್ಲಿದ್ದ ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳಲ್ಲಿ ಹೊಸ ಭರವಸೆ ಮೂಡಿಸಿದೆ.

IAS ಅಧಿಕಾರಿಗಳ ವರ್ಗಾವಣೆ ಪಟ್ಟಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಚ್. ಪ್ರಸನ್ನ : ಪ್ರಸ್ತುತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಎಚ್. ಪ್ರಸನ್ನ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಲೋಕಸೇವಾ ಆಯೋಗದ (KPSC) ಪರೀಕ್ಷಾ ನಿಯಂತ್ರಕರ ಹುದ್ದೆಯ ಹೆಚ್ಚುವರಿ ಪ್ರಭಾರ ನೀಡಲಾಗಿದೆ.

ಲವಿಶ್ ಓರ್ಡಿಯಾ ;ಯಾದಗಿರಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ (CEO) ಲವಿಶ್ ಓರ್ಡಿಯಾ ಅವರನ್ನು ಕೆಪಿಎಸ್‌ಸಿಯ ಜಂಟಿ ಪರೀಕ್ಷಾ ನಿಯಂತ್ರಕರಾಗಿ ವರ್ಗಾಯಿಸಲಾಗಿದೆ.

ಡಾ. ಅರುಂಧತಿ ಚಂದ್ರಶೇಖರ್ : ಪಂಚಾಯತ್ ರಾಜ್ ಆಯುಕ್ತರಾಗಿರುವ ಡಾ. ಅರುಂಧತಿ ಚಂದ್ರಶೇಖರ್ ಅವರಿಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯ ಇ-ಆಡಳಿತ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆಯನ್ನು ವಹಿಸಲಾಗಿದೆ

ಇತ್ತೀಚಿನ ದಿನಗಳಲ್ಲಿ ಕೆಪಿಎಸ್‌ಸಿ ನಡೆಸುತ್ತಿದ್ದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಪ್ರಮುಖವಾಗಿ ಅಧ್ಯಕ್ಷರ ಸಂಬಂಧಿಕರಿಗೆ ಹುದ್ದೆ ನೀಡಲಾದ ಪ್ರಕರಣದ ಉನ್ನತ ಮಟ್ಟದ ತನಿಖೆ ಮುಂದುವರಿದಿದೆ. ಇದರಿಂದಾಗಿ ಕೆಪಿಎಸ್‌ಸಿ ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆ ಕ್ಷೀಣಿಸಿತ್ತು.ಆದರೆ, ಕೆಇಎಯಲ್ಲಿ ಕಟ್ಟುನಿಟ್ಟಿನ ಕ್ರಮಗಳ ಮೂಲಕ ಪಾರದರ್ಶಕ ಪರೀಕ್ಷಾ ಪದ್ಧತಿ ತಂದು ಯಶಸ್ವಿಯಾಗಿದ್ದ ಎಚ್. ಪ್ರಸನ್ನ ಅವರಿಗೆ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಣದ ಜವಾಬ್ದಾರಿ ನೀಡಿರುವುದು ಉದ್ಯೋಗ ಆಕಾಂಕ್ಷಿಗಳಿಗೆ ಸಮಾಧಾನ ತಂದಿದ್ದು, ಮುಂಬರುವ ಪರೀಕ್ಷೆಗಳು ನ್ಯಾಯಸಮ್ಮತವಾಗಿ ನಡೆಯಲಿವೆ ಎಂಬ ಆಶಯ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular