ಬೆಂಗಳೂರು: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಆಗಸ್ಟ್ 12, 2026ರಂದು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಎ.ಎಸ್. ಪೊನ್ನಣ್ಣ ಅವರು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಶಿಷ್ಟಾಚಾರ ವಿಭಾಗದಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಯಿಂದ ಮುಖ್ಯಮಂತ್ರಿ ಕಚೇರಿಯಲ್ಲಿ ಎ.ಎಸ್. ಪೊನ್ನಣ್ಣ ಅವರಿಗೆ ಮಹತ್ವದ ಜವಾಬ್ದಾರಿ ದೊರೆತಂತಾಗಿದೆ.


