ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆ 27 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 20/08/2026 ಗುರುವಾರ ಬೆಳಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ಸಂದರ್ಶನಕ್ಕೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ: 20/08/2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 9591514154, 6363139123, 9686248369, 9886935603 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ನೇರ ಸಂದರ್ಶನ
ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ದಿನಾಂಕ 14-08-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಅರವಿಂದ್ ಮೋಟಾರ್ಸ್ ಪ್ರೈ. ಲಿ. ಹಾಗೂ ಸ್ವತಂತ್ರ ಮೈಕ್ರೋಫಿನ್ ಪ್ರೈ. ಲಿ. ಸಂಸ್ಥೆಗಳು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.
18 ರಿಂದ 30 ವರ್ಷದೊಳಗಿನ ಎಸ್ ಎಸ್ ಎಲ್ ಸಿ, ಪಿಯುಸಿ, ಡಿಪ್ಲೊಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದವರು ಭಾಗವಹಿಸಬಹುದು.
ನೇರ ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಹಾಜರಾಗಬೇಕು.
ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606, 9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

