ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಮೊಬೈಲ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಹೊರಬಿದ್ದಿದೆ.
ಪ್ರಜ್ವಲ್ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಪತ್ರಿಕೆಯಲ್ಲಿನ ಯುವತಿಯರ ಅಶ್ಲೀಲ ಫೋಟೋಗಳ ಕಟಿಂಗ್ ಗಳು ಪತ್ತೆಯಾಗಿವೆ. ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಮೊಬೈಲ್ ಪತ್ತೆಯಾದ ಹಿನ್ನೆಲೆಯಲ್ಲಿ ವಿಐಪಿ ಸೆಲ್ ನಿಂದ ಜನರಲ್ ಸೆಲ್ ಗೆ ಪ್ರಜ್ವಲ್ ರೇವಣ್ಣ ಅವರನ್ನು ಸ್ಥಳಾಂತರ ಮಾಡಲಾಗಿದೆ.
ಪ್ರಜ್ವಲ್ ರೇವಣ್ಣ ಅವರನ್ನು ಸಜಾಬಂಧಿಗಳ ಸೆಲ್ ಗೆ ಶಿಫ್ಟ್ ಮಾಡಲಾಗಿದೆ. ಪ್ರಜ್ವಲ್ ಗೆ ಫೋಕ್ಸೊ ಕೇಸ್ ನಲ್ಲಿ ಜೈಲು ಸೇರಿರುವ ಪ್ರತಾಪ್ ರಾಯ್ ಅಸಿಸ್ಟೆಂಟ್ ರೀತಿ ಇರುತ್ತಿದ್ದ ಎನ್ನಲಾಗಿದೆ.
ಜೈಲಿನಲ್ಲಿ ಅಕ್ರಮ ಚಟುವಟಿಕೆ ಹಿನ್ನೆಲೆ ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿ ಪರಿಶೀಲಿಸಿದಾಗ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ರೆಡ್ ಮಿ ಮೊಬೈಲ್ ಮತ್ತು ಚಾರ್ಜರ್, ಪೆನ್ ಡ್ರೈವ್ ಮತ್ತು ಪಾಕೆಟ್ ನೋಟ್ ಬುಕ್ ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

