HomeKarnatakaBIG NEWS: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ: ಆಡಳಿತ –ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ವೇದಿಕೆ ಸಜ್ಜು

BIG NEWS: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ: ಆಡಳಿತ –ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ವೇದಿಕೆ ಸಜ್ಜು

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇದು ಮೊದಲ ಪರೀಕ್ಷೆಯಾಗಿದೆ.

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದ ಬಳಿಕ ವಿಧಾನಮಂಡಲದ ಉಭಯ ಸದನಗಳ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ನೂತನ ಸಚಿವ ಬಿ. ನಾಗೇಂದ್ರ ಅವರ ಸಂಪುಟ ಸೇರ್ಪಡೆ ಮತ್ತು ಬಿಡದಿ ಟೌನ್ ಶಿಪ್ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿ ಪಕ್ಷಗಳಾದ ಬಿಜೆಪಿ- ಜೆಡಿಎಸ್ ನಡುವೆ ಜಟಾಪಟಿ ನಡೆಯುವ ಸಾಧ್ಯತೆ ಇದೆ. ಮೊದಲ ದಿನ ಸಂಪ್ರದಾಯದಂತೆ ಆಗಲಿದ ಗಣ್ಯರಿಗೆ ಸಂತಾಪ ಸೂಚನೆ ನಡೆಯಲಿದ್ದು, ಸೋಮವಾರದಿಂದ ಕಲಾಪ ನಡೆಯಲಿದೆ.

ಕ್ಲೀನ್ ಚಿಟ್ ಗೂ ಮೊದಲೇ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದು, ಕಾವೇರಿ ನದಿ ನೀರಿನ ವಿಚಾರ, ಕೆಪಿಎಸ್ಸಿ ಹಗರಣ, ಬಿಡದಿ ಟೌನ್ ಶಿಪ್ ವಿಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಉಭಯ ಸದನಗಳಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯುವ ಸಾಧ್ಯತೆ ದಟ್ಟವಾಗಿದೆ. ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗಿ ಇದು ಮೊದಲ ಅಧಿವೇಶನ. ಅವರ ಸಂಪುಟದ ಹಲವು ಸಚಿವರಿಗೂ ಕೂಡ ಮೊದಲ ಅಧಿವೇಶನ ಇದಾಗಿದೆ. ಅಧಿವೇಶನದಲ್ಲಿ ವಿಧಾನಸಭೆಗೆ ಹೊಸ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ. ವಿಧಾನ ಪರಿಷತ್ ನಲ್ಲಿಯೂ ಹೊಸ ಸಭಾಪತಿ, ಉಪಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular