HomeKarnatakaBREAKING: ಕಾವೇರಿ ವಿವಾದ: ಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಕನ್ನಡಪರ ಸಂಘಟನೆ ಮುಖಂಡರು

BREAKING: ಕಾವೇರಿ ವಿವಾದ: ಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಕನ್ನಡಪರ ಸಂಘಟನೆ ಮುಖಂಡರು

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆ ಮುಖ್ಯಂಡರು ಹಾಗೂ ರೈತ ಮುಖಂಡರು ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ತಮಿಳುನಾಡಿಗೆ ಪ್ರತಿದಿನ 12,000 ಕ್ಯೂಸೆಕ್ ನೀರಿನಂತೆ 15 ದಿನಗಳ ಕಾಲ ನೀರು ಹರಿಸುವಂತೆ CWRC ಹಾಗೂ CWMA ಆದೇಶ ನೀಡಿರುವ ಬೆನ್ನಲ್ಲೇ ಕರ್ನಾಟಕಕ್ಕೆ ಸಂಕಷ್ಟ ಎದುರಾಗಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಒಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ರಾಜಧಾನಿ ಬೆಂಗಳೂರು ಹಾಗೂ ಬೆಂಗಳೂರು ಹೊರವಲಯದಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ.

ಈ ನಡುವೆ ಕನ್ನಡಪರ ಸಂಘಟನೆ ಮುಖಂಡರು ಹಾಗೂ ರೈತ ಮುಖಂಡರು ಕುಡಿಯುವ ನೀರಿಗೂ ರಾಜ್ಯದಲ್ಲಿ ಸಂಕಷ್ಟವಿರುವ ಸಂದರ್ಭದಲ್ಲಿ ತಮಿಲುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಹಾಗೂ ರಾಜ್ಯದ ರೈತರ, ಜನರ ಹಿತ ಕಾಯುವಂತೆ ಒತ್ತಾಯಿಸಿಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಸದಾಶಿವ ನಗರದಲ್ಲಿರುವ ಸಿಎಂ ನಿವಾಸಕ್ಕೆ ಆಗಮಿಸಿದ ಕನ್ನಡಪರ ಸಂಘಟನೆ ಮುಖಂಡರಾದ ಸಾ.ರಾ.ಗೋವಿಂದು, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಶಿವರಾಮೇಗೌಡ, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು.

ಈ ವೇಳೆ ಮಳೆ ಕೊರತೆಯಿಂದಾಗಿ ನಮಗೇ ಕುಡಿಯಲು ನೀರಿಲ್ಲ. ರೈತರ ಬೆಳೆಗಳಿಗೆ ನೀರಲ್ಲದೇ ಸಂಕಷ್ಟ ಎದುರಾಗಿದೆ. ಕೆ.ಆರ್.ಎಸ್.ಡ್ಯಾಂ, ಹಾರಂಗಿ ಜಲಾಶಯಗಳು ಇನ್ನೂ ಭರ್ತಿಯಾಗಿಲ್ಲ. ನೀರಿನ ಒಳ ಹರಿವು ಕಡಿಮೆಯಾಗಿದೆ. ಇಂತಹ ಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ರಾಜ್ಯ ಸರ್ಕಾರ ರಜ್ಯದ ರೈತರ, ಜನರ ಹಿತ ಕಾಯಬೇಕು. ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡಿದರು.

ಕನ್ನಡಪರ ಹೋರಾಟಗಾರರ ಮನವಿಗೆ ಸ್ಪಂದಿಸಿದ ಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದ ರೈತರ ಹಿತಕಾಯಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದರು. ಕರ್ನಾಟಕ ಬಂದ್ ನಿಂದಾಗಿ ಜನರಿಗೆ ಇನ್ನಷ್ಟು ತೊಂದರೆಯಾಗುತ್ತದೆ. ವ್ಯಾಪಾರ-ವಹಿವಾಟು ಸ್ಥಗಿತಗೊಂಡು ರಾಜ್ಯದ ಆರ್ಥಿಕತೆಗೆ ಹೊಡೆತ ಬೀಳುತ್ತದೆ. ಹಾಗಾಗಿ ಬಂದ್ ಕೈಬಿಡುವಂತೆ ಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ಈ ವೇಳೆ ಕನ್ನಡಪರ ಸಂಘಟನೆ ಮುಖಂಡರು ಹಾಗೂ ರೈತ ಮುಖಂಡರು ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದು, ರೈತರ ಹಾಗೂ ರಾಜ್ಯದ ಹಿತ ಕಾಯುವ ಕ್ರಮ ಕೈಗೊಳ್ಳುವುದಾದರೆ ಬಂದ್ ಹಿಂಪಡೆಯುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular