ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಸಂತ್ರಸ್ತ ನಟಿ ನೀಡಿರುವ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ನಟಿ ಬೆಂಗಳೂರಿನ ಚಂದ್ರಾಲೇಔಟ್ ಠಾಣೆಯಲ್ಲಿ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ರಾಘವೇಂದ್ರ ಬಂಧಿತ ಆರೋಪಿ.
ಇನ್ನು ಇದೇ ಪ್ರಕರಣ ಸಂಬಂಧ ಆರೋಪಿ ರಾಘವೇಂದ್ರ ಕಡೆಯವರು ನಟಿಯ ಸಹೋದರಿ ವಿರುದ್ಧ ತಲಘಟ್ಟಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯ ತಾಯಿಗೆ ಕರೆ ಮಾಡಿ ಬೆದರಿಕೆ ಹಾಕಿದ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಲಘಟ್ಟಪುರ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿದೆ.
ಆರೋಪಿ ರಾಘವೇಂದ್ರ ನಟಿಯ ಕೆಲ ಫೋಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆ ಹಾಕುತ್ತಿದ್ದನಂತೆ. ಇದೇ ವಿಚಾರವ್ ಆಗಿ ನಟಿಯ ಸಹೋದರಿ ಆರೋಪಿಯ ತಾಯಿಗೆ ಕರೆ ಮಾಡಿ ಬೈದಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಆರೋಪಿ ನಟಿಯ ಸಹೋದರಿ ವಿರುದ್ಧ ದೂರು ದಾಖಲಿಸಿದ್ದಾನೆ ಎಂದು ತಿಳಿದುಬಂದಿದೆ.

