HomeKarnatakaBREAKING: ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಜಿರಳೆ, ಫಂಗಸ್ ಪತ್ತೆ

BREAKING: ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಜಿರಳೆ, ಫಂಗಸ್ ಪತ್ತೆ

ಬೆಂಗಳೂರು: ಹೋಟೆಲ್, ರೆಸ್ಟೋರೆಂಟ್, ಆಹಾರ ಮಳಿಗೆಗಳ ಮೇಲೆ ದಾಳಿ ಮುಂದುವರೆಸಿರುವ ಆಹಾರ ಇಲಾಖೆ ಅಧಿಕಾರಿಗಳು ಇಂದು ವಿಕಾಸಸೌಧದ ಕ್ಯಾಂಟೀನ್ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

ವಿಕಾಸಸೌಧದ ಮೊದಲ ಮಹಡಿಯಲ್ಲಿರುವ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಈ ವೇಳೆ ತಟ್ಟೆಗಳನ್ನು ಶೇಖರಿಸಿಡುವ ಜಾಗದಲ್ಲಿ ಜಿರಳೆಗಳು ಮತ್ತು ಗ್ರಾಹಕರಿಗೆ ಆಹಾರ ನೀಡುವ ಅಡಕೆ ಪ್ಲೇಟ್‌ಗಳ ಮೇಲೆ ಫಂಗಸ್ ಪತ್ತೆಯಾಗಿದ್ದು, ಕ್ಯಾಂಟೀನ್ ಅನ್ನು ಸೀಜ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಲೋಪ, ಸ್ವಚ್ಛತೆಯ ಕೊರತೆ, ಅವಧಿ ಮೀರಿದ ಪದಾರ್ಥಗಳ ಬಳಕೆ ಹಾಗೂ ನಿಯಮಿತವಾಗಿ ಪೆಸ್ಟ್ ಕಂಟ್ರೋಲ್ ಮಾಡದಿರುವುದು ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗಳು ಕಂಡುಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕ್ಯಾಂಟೀನ್‌ಗೆ ಬೀಗ ಜಡಿದಿದ್ದು, ಸ್ಥಳದಲ್ಲಿ ‘ತಾತ್ಕಾಲಿಕವಾಗಿ ಕ್ಯಾಂಟೀನ್ ಬಂದ್’ ಎಂಬ ನಾಮಫಲಕವನ್ನು ಅಳವಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular