HomeKarnatakaಇಂದು ವಿಧಾನಸಭೆ ಅಧ್ಯಕ್ಷ, ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ: ಬಿಜೆಪಿ ಬಹಿಷ್ಕಾರ

ಇಂದು ವಿಧಾನಸಭೆ ಅಧ್ಯಕ್ಷ, ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ: ಬಿಜೆಪಿ ಬಹಿಷ್ಕಾರ

ಬೆಂಗಳೂರು: ವಿಧಾನಸಭೆ ಅಧ್ಯಕ್ಷರು ಮತ್ತು ವಿಧಾನ ಪರಿಷತ್ ಸಭಾಪತಿ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದೆ.

ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಆಡಳಿತಾರೂಢ ಕಾಂಗ್ರೆಸ್ ಸ್ಪಷ್ಟ ಬಹುಮತ ಹೊಂದಿದ್ದರೂ ಪ್ರತಿರೋಧ ದಾಖಲಿಸುವ ಉದ್ದೇಶದಿಂದ ಬಿಜೆಪಿ -ಜೆಡಿಎಸ್ ಮೈತ್ರಿಕೂಟ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಿದೆ.

ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಮೊಹಮ್ಮದ್ ಅವರು ಪರಿಷತ್ತಿನ ಕಾರ್ಯದರ್ಶಿ ಜ್ಯೋತಿ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಮೈತ್ರಿಕೂಟದ ಅಭ್ಯರ್ಥಿಯಾಗಿ ಪಿ.ಹೆಚ್. ಪೂಜಾರ ಅವರು ಕೂಡ ನಾಮಪತ್ರ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸಭೆಯ ಅಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ನ ಜಿ.ಎಸ್. ಪಾಟೀಲ್ ಗುರುವಾರ ವಿಧಾನಸಭಾ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿಯವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಿಂದ ಜಿ.ಎಸ್. ಪಾಟೀಲ್ ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಶುಕ್ರವಾರ ಅವರು ಸ್ಪೀಕರ್ ಆಗಿ ಆಯ್ಕೆಯಾಗುವುದು ಖಚಿತವಾಗಿದೆ. ಈ ನಡುವೆ ಸ್ಪೀಕರ್ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬಿಜೆಪಿ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular