HomeKarnatakaಕಾರ್ಮಿಕರ ಕನಿಷ್ಠ ವೇತನ ಶೇ. 60ರಷ್ಟು ಹೆಚ್ಚಳ: ಪರಿಶೀಲನೆಗೆ ಸಚಿವ ಸಂಪುಟ ಉಪಸಮಿತಿ ರಚನೆ

ಕಾರ್ಮಿಕರ ಕನಿಷ್ಠ ವೇತನ ಶೇ. 60ರಷ್ಟು ಹೆಚ್ಚಳ: ಪರಿಶೀಲನೆಗೆ ಸಚಿವ ಸಂಪುಟ ಉಪಸಮಿತಿ ರಚನೆ

ಬೆಂಗಳೂರು: ರಾಜ್ಯದಲ್ಲಿ ವಿವಿಧ ವರ್ಗಗಳ ಕಾರ್ಮಿಕರ ಕನಿಷ್ಠ ವೇತನವನ್ನು ಶೇಕಡ 60ರಷ್ಟು ಹೆಚ್ಚಿಸಲು ಮೇ ತಿಂಗಳಲ್ಲಿ ಕಾರ್ಮಿಕ ಇಲಾಖೆ ಹೊರಡಿಸಿದ್ದ ಅಧಿಸೂಚನೆ ಬಗ್ಗೆ ಮರುಪರಿಶೀಲಿಸಲು ಸಚಿವ ಸಂಪುಟ ಉಪಸಮಿತಿ ರಚನೆ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಕಾರ್ಮಿಕ ಇಲಾಖೆ ರಾಜ್ಯದ 99 ಅಧಿಸೂಚಿತ ಉದ್ದಿಮೆಗಳ ಸಂಘಟಿತ ಮತ್ತು ಅಸಂಘಟಿತ ವಲಯದ 1.5 ಕೋಟಿಗೂ ಅಧಿಕ ಕಾರ್ಮಿಕರ ಕನಿಷ್ಠ ವೇತನವನ್ನು ಸರಾಸರಿ ಶೇಕಡ 60ರಷ್ಟು ಹೆಚ್ಚಿಸಿ ಮೇ ತಿಂಗಳಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಇದಕ್ಕೆ ಉದ್ಯಮ ವಲಯದಿಂದ ವಿರೋಧ ವ್ಯಕ್ತವಾಗಿತ್ತು.

ಉದ್ಯಮಿಗಳು ಮತ್ತು ಹೂಡಿಕೆದಾರರು ಕನಿಷ್ಠ ವೇತನ ನಿಯಮಗಳಿಂದಾಗಿ ಇತ್ತೀಚೆಗೆ ಹೂಡಿಕೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎನ್ನುವ ಅಭಿಪ್ರಾಯ ಕೇಳಿ ಬಂದಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ ಕನಿಷ್ಠ ವೇತನ ಶೇಕಡ 60ರಷ್ಟು ಹೆಚ್ಚಳ ಮಾಡಿರುವ ನಿರ್ಧಾರ ಸರಿ ಇದೆ. ಇದು ಕಾರ್ಮಿಕರ ಬಹು ವರ್ಷಗಳ ಬೇಡಿಕೆಯಾಗಿದ್ದು, ಕನಿಷ್ಠ ವೇತನ ನಿರ್ಧರಿಸುವಾಗ ಸುಪ್ರೀಂ ಕೋರ್ಟ್ ನ ನಿರ್ದೇಶನ ಪಾಲಿಸಿ ತೀರ್ಮಾನ ಕೈಗೊಳ್ಳಲಾಗಿದೆ ಎನ್ನುವ ಅಭಿಪ್ರಾಯ ಸಂಪುಟ ಸಭೆಯಲ್ಲಿ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದ್ಯೋಗದ ಮಾದರಿಗೆ ಅನುಗುಣವಾಗಿ ತಿಂಗಳ ಕನಿಷ್ಠ ವೇತನ 19,300 ರೂ.ಗಳಿಂದ 31,100 ರೂ.ವರೆಗೆ ಹೆಚ್ಚಳವಾಗಲಿದೆ. ಉದ್ಯೋಗದಾತರಿಗೆ ಇದು ಹೊರೆಯಾಗಬಹುದು. ಇದರಿಂದ ರಾಜ್ಯದಲ್ಲಿ ಹೂಡಿಕೆಗೆ ಪೂರಕ ವಾತಾವರಣ ಇಲ್ಲವೆನ್ನುವ ಭಾವನೆ ಸೃಷ್ಟಿಯಾಗಬಹುದು. ಈಗಾಗಲೇ ಎಲ್ಲಾ ಅಂಶಗಳ ಬಗ್ಗೆ ಮರು ಪರಿಶೀಲನೆ ನಡೆಸಲು ಸಚಿವ ಸಂಪುಟ ಉಪಸಮಿತಿ ರಚಿಸಲು ತೀರ್ಮಾನ ಕೈಗೊಳ್ಳಲಾಗಿದೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular