ಮಡಿಕೇರಿ: ವ್ಯಕ್ತಿಯೊಬ್ಬ ತನ್ನ ನಾದಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಆಕೆ ವಿರೋಧಿಸಿದಾಗ ಮಗುವನ್ನು ಕೊಲೆ ಮಾಡಿದ್ದಾನೆ.
ಕೊಡಗು ಜಿಲ್ಲೆ ವಿರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ. ನಾದಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಆಕೆ ವಿರೋಧಿಸಿದಾಗ ಸಿಟ್ಟಿನಿಂದ ಆಕೆಯ ನಾಲ್ಕು ವರ್ಷದ ಮಗುವಿನ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್(35) ಎಂಬುವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಲವು ತಿಂಗಳುಗಳಿಂದ ಭಾವ ಪ್ರತಾಪ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಬುಧವಾರ ಮತ್ತೆ ಕೃತ್ಯಕ್ಕೆ ಮುಂದಾದಾಗ ವಿರೋಧಿಸಿದೆ. ಇದರಿಂದ ಕೋಪಗೊಂಡು ನನ್ನ ಪುತ್ರನ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿದ್ದಾನೆ. ನಂತರ ನನ್ನ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎಂದು ಸಂತ್ರಸ್ತೆ ವಿರಾಜಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

