ಬೆಂಗಳೂರು: ಇಂಧನ ಬೆಲೆ ಹೆಚ್ಚಳದಿಂದ ಸಾರಿಗೆ ನಿಗಮಗಳಿಗೆ ಭಾರಿ ನಷ್ಟವಾಗುತ್ತಿದ್ದು, ಇದರಿಂದ ಬಸ್ ಪ್ರಯಾಣದ ಹೆಚ್ಚಳ ಅನಿವಾರ್ಯವಾಗಿದೆ. ಜನರಿಗೆ ಹೊರೆಯಾಗದಂತೆ ಪ್ರಯಾಣ ದರ ಹೆಚ್ಚಳ ಮಾಡಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಸ್ ಪ್ರಯಾಣ ದರ ಹೆಚ್ಚಳ ಮಾಡಿದ ನಂತರ 9ಕ್ಕೂ ಹೆಚ್ಚು ಬಾರಿ ತೈಲೋತ್ಪನ್ನಗಳ ಬೆಲೆ ಹೆಚ್ಚಳವಾಗಿದ್ದರೂ, ಬಸ್ ಪ್ರಯಾಣ ದರ ಹೆಚ್ಚಳ ಮಾಡಿಲ್ಲ. ಇದರಿಂದ ನಿಗಮಗಳಿಗೆ ಭಾರಿ ಪ್ರಮಾಣದಲ್ಲಿ ನಷ್ಟವಾಗುತ್ತಿದೆ ಎಂದು ತಿಳಿಸಿದ್ದಾರೆ.
ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ನಿವೃತ್ತ ಐಎಎಸ್ ಅಧಿವಾರಿ ಅತುಲ್ ತಿವಾರಿ ನೇತೃತ್ವದಲ್ಲಿ ರಚಿಸುವ ಸಮಿತಿ ದರ ಹೆಚ್ಚಳದ ಸಾಧಕ ಬಾಧಕ ವರದಿ ನೀಡಲಿದೆ. ಬಳಿಕ ಪ್ರಯಾಣಿಕರಿಗೆ ಹೊರೆಯಾಗದಂತೆ ಪ್ರಯಾಣ ದರ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

