HomeKarnatakaಅದು ಎನ್ ಕೌಂಟರ್ ಅಲ್ಲ; ಪೋಚಿಂಗ್ ಕಾರ್ಯಾಚರಣೆ: ಮೂವರು ಬೇಟೆಗಾರರು ಬಲಿ ಪ್ರಕರಣಕ್ಕೆ ಗೃಹ ಸಚಿವರ...

ಅದು ಎನ್ ಕೌಂಟರ್ ಅಲ್ಲ; ಪೋಚಿಂಗ್ ಕಾರ್ಯಾಚರಣೆ: ಮೂವರು ಬೇಟೆಗಾರರು ಬಲಿ ಪ್ರಕರಣಕ್ಕೆ ಗೃಹ ಸಚಿವರ ಸ್ಪಷ್ಟನೆ

ಬೆಂಗಳೂರು: ಚಾಮರಾಜನಗರದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿಗಳ ಗುಂಡೇಟಿಗೆ ಮೂವರು ಬೇಟೆಗಾರರು ಬಲಿಯಾದ ಪ್ರಕರಣ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅದು ಎನ್ ಕೌಂಟರ್ ಅಲ್ಲ, ಪೋಚಿಂಗ್ ಕಾರ್ಯಾಚರಾಣೆ ಎಂದಿದ್ದಾರೆ.

ಚಾಮರಾಜನಗರದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಪ್ರಾಣಿಗಳ ಬೇಟೆ ತಡೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಪೋಚಿಂಗ್ ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಈ ಘಟನೆ ನಡೆದಿದೆ. ಯಾವುದೇ ಎನ್ ಕೌಂಟರ್ ನಡೆದಿಲ್ಲ, ಅದು ಪೋಚಿಂಗ್ ವೇಳೆ ನಡೆದ ಘಟನೆ. ಈ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸ್ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ. ಇನ್ನಷ್ಟು ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಏನಿದು ಘಟನೆ?

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಖಚಿತ ಮಾಹಿತಿ ಆಧರಿಸಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಗೆ ತೆರಳಿದ್ದ ವೇಳೆ, ಮೂವರು ಬೇಟೆಗಾರರು ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಕಾಡುಗಳ್ಳರು ಅರಣ್ಯ ಸಿಬ್ಬಂದಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ. ಈ ವೇಳೆ ಅರಣ್ಯ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಗುಂಡಿನ ದಾಳಿಯಲ್ಲಿ ಮೂವರು ಕಾಡಿಗಳ್ಳರು ಬಲಿಯಾಗಿದ್ದಾರೆ.

ಮೃತರನ್ನು ಪೀಟರ್, ಕುಮಾರ್, ಅಂತೋಣಿಸ್ವಾಮಿ ಎಂದು ಗುರುತಿಸಲಾಗಿದೆ. ಗುಂಡಿನ ಚಕಮಕಿ ವೇಳೆ ಓರ್ವ ಅರಣ್ಯ ಸಿಬ್ಬಂದಿಗೂ ಗಾಯವಾಗಿದ್ದು, ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಮತ್ತೊಬ್ಬ ಬೇಟೆಗಾರ ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದೆ. ಕಾರ್ಯಾಚರಣೆಯಲ್ಲಿ ಒಂದು ನಾಡಬಂದೂಕು ಹಾಗೂ ಜಿಂಕೆಯ ಮೃತದೇಹ ವಶಪಡಿಸಿಕೊಳ್ಳಲಾಗಿದೆ.

ಮೂವರು ಬೇಟೆಗಾರರ ಸಾವಿನ ಬೆನ್ನಲ್ಲೇ ಅರಣ್ಯ ಇಲಾಖೆ ವಿರುದ್ಧ ಕುಟುಂಬದವರು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಟೆಗಾರರನ್ನು ಮೊದಲು ಸೆರೆಹಿಡಿದು ಬಳಿಕ ಹತ್ತಿರದಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಅರಣ್ಯ ಇಲಾಖೆ ನಿರಾಕರಿಸಿದ್ದು, ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲೇ ಸಾವು ಸಂಭವಿಸಿದೆ ಎಂದು ಹೇಳಿದೆ.

ಮೃತರ ಕುಟುಂಬದವರು ಹಾಗೂ ಸ್ಥಳೀಯರು ಶಾಗ್ಯದಲ್ಲಿರುವ ಉಪವಲಯ ಅರಣ್ಯಾಧಿಕಾರಿಗಳ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಕಚೇರಿಯ ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಬೈಕ್ ಸೇರಿದಂತೆ ಕೈಗೆ ಸಿಕ್ಕ ವಸ್ತುಗಳನ್ನ ಚೆಲ್ಲಾಪಿಲ್ಲಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಕೊಡಿಸುವಂತೆ ಕಣ್ಣೀರಿಟ್ಟಿದ್ದಾರೆ.ಘಟನೆಯಿಂದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular