HomeKarnatakaಸೋಮಾವತಿ ನದಿಗೆ ಉರುಳಿ ಬಿದ್ದ ಕಾರು: ಅದೃಷ್ಟವಶಾತ್ ಬಚಾವಾದ ದಂಪತಿ

ಸೋಮಾವತಿ ನದಿಗೆ ಉರುಳಿ ಬಿದ್ದ ಕಾರು: ಅದೃಷ್ಟವಶಾತ್ ಬಚಾವಾದ ದಂಪತಿ

ಚಿಕ್ಕಮಗಳೂರು: ಪ್ರವಾಸಕ್ಕೆಂದು ಬಂದಿದ್ದ ದಂಪತಿಯ ಕಾರು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗಣಪತಿ ಕಟ್ಟೆ ಬಳಿ ನಡೆದಿದೆ.

ವೇಗವಾಗಿ ಚಲಿಸುತ್ತಿದ್ದ ಕಾರು ಸೋಮಾವತಿ ನದಿ ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ನಿಯಂತ್ರಣ ತಪ್ಪಿ ರಭಸವಾಗಿ ಹರಿಯುತ್ತಿದ್ದ ನದಿಗೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ದಂಪತಿ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.

ನದಿಗೆ ಬಿದ್ದ ಕಾರಿಗೆ ಬಂಡೆ ಅಡ್ಡ ಸಿಕ್ಕ ಪರಿಣಾಮ ಕಾರು ಕೊಚ್ಚಿ ಹೋಗಲು ಸಾಧ್ಯವಾಗಿಲ್ಲ. ಕಾರು ನದಿಗೆ ಬೀಳುತ್ತಿದ್ದಂತೆ ಸ್ಥಳೀಯರು ತಕ್ಷಣ ರಕ್ಷಣೆಗೆ ಧಾವಿಸಿದ್ದಾರೆ. ದಂಪತಿಯನ್ನು ರಕ್ಷಿಸಿದ್ದಾರೆ. ಕಾರಿಗೆ ಹಗ್ಗ ಕಟ್ಟಿ ಮೇಲೆಳೆದಿದ್ದಾರೆ. ಸದ್ಯ ಕಾರಿನಲ್ಲಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ಜಾಗದಲ್ಲಿ ಈ ಹಿಂದೆಯೂ ಹಲವು ಅಪಘಾತಗಳು ಸಂಭವಿಸಿವೆ. ನದಿಗೆ ವಾಹನ ಬಿದ್ದು ದುರಂತ ಸಂಭವಿಸಿದೆ. ಸೇತುವೆಗೆ ತಡೆಗೋಡೆ ಇಲ್ಲದಿರುವುದೇ ಅವಘಡಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular