HomeKarnatakaSHOCKING : ಆಷಾಢ ಮುಗಿದರೂ ತವರಿನಿಂದ ಬರಲಿಲ್ಲ ಪತ್ನಿ.. ತುಮಕೂರಿನಲ್ಲಿ ಮನನೊಂದು ಪತಿ ಆತ್ಮಹತ್ಯೆ

SHOCKING : ಆಷಾಢ ಮುಗಿದರೂ ತವರಿನಿಂದ ಬರಲಿಲ್ಲ ಪತ್ನಿ.. ತುಮಕೂರಿನಲ್ಲಿ ಮನನೊಂದು ಪತಿ ಆತ್ಮಹತ್ಯೆ

ತುಮಕೂರು: ಆಷಾಢ ಮಾಸಕ್ಕೆ ತವರು ಮನೆಗೆ ತೆರಳಿದ್ದ ಪತ್ನಿ ವಾಪಸ್ ಮನೆಗೆ ಬರದ ಹಿನ್ನೆಲೆಯಲ್ಲಿ ಮನನೊಂದು ಪತಿಯೊಬ್ಬ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕುಣಿಗಲ್ ಪಟ್ಟಣದ ಮಹಾವೀರ ನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು 28 ವರ್ಷದ ಅವಿನಾಶ್ ಎಂದು ಗುರುತಿಸಲಾಗಿದೆ. ಸುಮಾರು ಆರು ತಿಂಗಳ ಹಿಂದಷ್ಟೇ ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ಯುವತಿಯನ್ನು ಅವಿನಾಶ್ ಪ್ರೀತಿಸಿ ವಿವಾಹವಾಗಿದ್ದ ಎನ್ನಲಾಗಿದೆ.

ಆಷಾಢ ಮಾಸದ ಹಿನ್ನೆಲೆಯಲ್ಲಿ ಅವಿನಾಶ್ ಅವರ ಪತ್ನಿ ತವರು ಮನೆಗೆ ತೆರಳಿದ್ದರು. ಬಳಿಕ ಪತ್ನಿಗೆ ಕರೆ ಮಾಡಿ ಮನೆಗೆ ವಾಪಸ್ ಬರುವಂತೆ ಅವಿನಾಶ್ ತಿಳಿಸಿದ್ದರು. ಆದರೆ ಪತ್ನಿ ತಾನು ಈಗ ವಾಪಸ್ ಬರುವುದಿಲ್ಲ ಎಂದು ಹೇಳಿದ್ದಾಗಿ ವರದಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತ್ನಿ ಮನೆಗೆ ಬಾರದಿದ್ದಕ್ಕೆ ಮನನೊಂದು ಕೃತ್ಯ

ಪತ್ನಿ ಮನೆಗೆ ವಾಪಸ್ ಬರದ ವಿಚಾರದಿಂದ ಅವಿನಾಶ್ ತೀವ್ರವಾಗಿ ಮನನೊಂದಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿದು ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸೂಚನೆ: ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಸಂಕಷ್ಟದಲ್ಲಿರುವವರು ವಿಶ್ವಾಸಾರ್ಹ ವ್ಯಕ್ತಿಗಳೊಂದಿಗೆ ಮಾತನಾಡಿ ತಕ್ಷಣ ವೃತ್ತಿಪರ ಸಹಾಯ ಪಡೆಯುವುದು ಮುಖ್ಯ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular