HomeKarnatakaBREAKING : ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ ; ಅರಣ್ಯ ಸಿಬ್ಬಂದಿಗಳ ವಿರುದ್ಧ 'FIR'...

BREAKING : ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ ; ಅರಣ್ಯ ಸಿಬ್ಬಂದಿಗಳ ವಿರುದ್ಧ ‘FIR’ ದಾಖಲು

ಚಾಮರಾಜನಗರ :   ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಸಿಬ್ಬಂದಿಗಳ ವಿರುದ್ಧ ಎಫ್ ಐ ಆರ್ (FIR) ದಾಖಲಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಅರಣ್ಯ ಪ್ರದೇಶದಲ್ಲಿ ಅಕ್ರಮ ಬೇಟೆಗೆ ತೆರಳಿದ್ದವರನ್ನು ತಡೆಯುವ ವೇಳೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಅರಣ್ಯದಲ್ಲಿ ಬೇಟೆಗಾರರು ಶಸ್ತ್ರಾಸ್ತ್ರಗಳೊಂದಿಗೆ ಓಡಾಡುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಮರಾಜನಗರ ಜಿಲ್ಲೆಯ ಹನೂರು ಪೊಲೀಸ್ ಠಾಣೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಅರಣ್ಯಕ್ಕೆ ಹಸುಗಳನ್ನು ಹುಡುಕಿಕೊಂಡು ತೆರಳಿದ್ದ ವೇಳೆ ತನ್ನ ಪತಿ ಆ್ಯಂಟನಿ ಸ್ವಾಮಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಅವರ ಪತ್ನಿ ಲೂರ್ದಾಮೇರಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ನಿರ್ದಿಷ್ಟ ಅಧಿಕಾರಿಗಳ ಹೆಸರುಗಳನ್ನು ಉಲ್ಲೇಖಿಸದೆ, ‘ಅರಣ್ಯ ಇಲಾಖೆ ಅಧಿಕಾರಿಗಳು’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 103(1) ಅಡಿ ಪ್ರಕರಣ ದಾಖಲಾಗಿದೆ.

ಆ್ಯಂಟನಿ ಸ್ವಾಮಿ ಅವರು ಹಸುಗಳನ್ನು ಹುಡುಕಿಕೊಂಡು ಅರಣ್ಯ ಪ್ರದೇಶಕ್ಕೆ ತೆರಳಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಕರಣದ ಕುರಿತು ಹನೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular