ಬೆಂಗಳೂರು–ಮೈಸೂರು ಇನ್ಪ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (BMICP) ಅಕ್ರಮಗಳ ಬಗ್ಗೆ ಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದು, ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಕೂಡಲೇ ಸ್ಥಗಿತಗೊಳಿಸುವಂತೆ ತಿಳಿಸಿದ್ದಾರೆ.
ಅನಧಿಕೃತವಾಗಿ ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಕೋರ್ಟ್ ಆದೇಶ ಇದ್ದರೂ ಸರ್ಕಾರ ಗಮನಹರಿಸುತ್ತಿಲ್ಲ. ನೈಸ್ ಯೋಜನೆಯನ್ನು ಸರ್ಕಾರ ವಶಕ್ಕೆ ಪಡೆಯಬೇಕು. ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಕೂಡಲೇ ನಿಲ್ಲಿಸಬೇಕು ಎಂದು ಪತ್ರದ ಮೂಲಕ ಸಿಎಂಗೆ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ನೆಲದ ಕಾನೂನು ಹಾಗೂ Frame Work Agreement ಅನ್ನು ಉಲ್ಲಂಘಿಸಿ ನೈಸ್ ಸಂಸ್ಥೆ ಯಾವ ರೀತಿ ಅಕ್ರಮಗಳನ್ನು ಎಸಗಿದೆ ಎಂಬ ಬಗ್ಗೆ ಪತ್ರದಲ್ಲಿ ಸುದೀರ್ಘವಾಗಿ ವಿವರಿಸಿದ್ದಾರೆ. ಭೂಸ್ವಾಧೀನ ಮಾಡಿಕೊಂಡು 23 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ನೀಡದಿರುವುದರಿಂದ ಇವರೆಲ್ಲರೂ ಬೀದಿ ಪಾಲಾಗಿದ್ದಾರೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
https://twitter.com/hd_kumaraswamy/status/2088864138525302849

