ಚಿಕ್ಕಬಳ್ಳಾಪುರ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಯುವಕ, ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ನಡೆದಿದೆ.
ಅಪಘಾತದಲ್ಲಿ ಉತ್ತರ ಪ್ರದೇಶ ಮೂಲದ ಯುವಕ ಮತ್ತು ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈಶಾ ಆದಿ ಯೋಗಿ ದರ್ಶನ ಪಡೆದು ಬೈಕ್ ನಲ್ಲಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ವೇಳೆ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

