ಚಿತ್ರದುರ್ಗ: ಎರ್ಟಿಗಾ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಗಹತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಾರಪುರ ಬಳಿ ನಡೆದಿದೆ.
ಕೋನಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಏಳು ಜನರು ಗಂಭೀರವಾಗಿ ಗಾಯಗೊಂಡಿದಾರೆ. ಮೃತರನ್ನು ರಾಮನಗರ ಜಿಲ್ಲೆಯ ಮಾಗಡಿ ಮೂಲದ ಶಿವಕುಮಾರ್ (37) ಹಾಗೂ ಮಲ್ಲಯ್ಯ (40) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

