HomeKarnatakaಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ: ಸದನದಲ್ಲಿ ಕಾವೇರಲಿದೆ ಚರ್ಚೆ; ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ: ಸದನದಲ್ಲಿ ಕಾವೇರಲಿದೆ ಚರ್ಚೆ; ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್ ಮುಂಗಾರು ಅಧಿವೇಶನದ ಮೂರನೇ ದಿನವಾದ ಇಂದು ಸರ್ಕಾರದ ವಿರುದ್ಧ ವಿಪಕ್ಷಗಳ ಹೋರಾಟ ತೀವ್ರಗೊಳ್ಳಲಿದೆ. ಒಂದೆಡೆ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಗಿಪಟ್ಟು ಹಿಡಿಯಲಿದ್ದಾರೆ. ಮತ್ತೊಂದೆಡೆ ಬಿಡದಿ ಟೌನ್ ಶಿಪ್ ವಿರೋಧಿಸಿ ಸದದಲ್ಲಿ ಪ್ರತಿಭಟನೆಗಳು ಕಾವೇರಲಿವೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ. ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ಬಿಜೆಪಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ತೀವ್ರಗೊಳಿಸಲು ಸಿದ್ಧವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೊಂದೆಡೆ ಬಿಡದಿ ಟೌನ್ ಶಿಪ್ ವಿರೋಧಿಸಿ ಹಾಗೂ ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಕೈಬಿಡಿವಂತೆ ಒತ್ತಾಯಿಸಿ ಹೋರಾಟ ನಡೆಸಲು ವಿಪಕ್ಷಗಳು ಸಜ್ಜಾಗಿವೆ. ಬಿಜೆಪಿ, ಜೆಡಿಎಸ್‌ನೊಂದಿಗೆ ಸೇರಿ ಸರ್ಕಾರದ ವಿರುದ್ಧ ಸಮರ ಸಾರಿದೆ.

ವಾಲ್ಮೀಕಿ ನಿಗಮದ ಹಗರಣ, ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದು, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ನೆಪದಲ್ಲಿ ವಿಧವಾ, ವೃದ್ಧಾಪ್ಯ, ವಿಕಲಚೇತನರ ಪಿಂಚಣಿ ಸ್ಥಗಿತಗೊಳಿಸಿರುವುದು, ಬಿಡದಿ ಟೌನ್‌ಶಿಪ್ ಯೋಜನೆ ಸ್ಥಗಿತದ ಬೇಡಿಕೆ ಹಾಗೂ ಆರ್‌ಎಸ್‌ಎಸ್ ಗುರಿಯಾಗಿಸಿಕೊಂಡು ರೂಪಿಸಲಾದ ಹೊಸ ಮಸೂದೆ ವಿರುದ್ಧ ಪ್ರತಿಭಟನೆಗೆ ಯೋಜನೆ ರೂಪಿಸಲಾಗಿದೆ.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಬಲವಂತವಾಗಿ ಕೆಳಗಿಳಿಸಿ ಸಾಂವಿಧಾನಿಕ ಹುದ್ದೆಗಳ ದುರುಪಯೋಗ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪಿಸಲು ಸಿದ್ಧವಾಗಿದೆ. ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲದೆ, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಬೃಹತ್ ಪ್ರತಿಭಟನೆಗಳನ್ನು ನಡೆಸಲು ಸಿದ್ಧತೆ ನಡೆಸಿದ್ದು, ಇಂದಿನಿಂದ ಉಭಯ ಸದನಗಳಲ್ಲಿ ಭಾರಿ ರಾಜಕೀಯ ಕದನ ನಡೆಯುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular