ಬೆಂಗಳೂರು: ರಾಜ್ಯದ ಎಲ್ಲಾ ಹೋಟೆಲ್‌ಗಳು ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ QR ಕೋಡ್ ಅಳವಡಿಸುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ. ಗ್ರಾಹಕರು ಹೋಟೆಲ್‌ನ ಆಹಾರ, ಸ್ವಚ್ಛತೆ ಸೇರಿದಂತೆ ಯಾವುದೇ ಸಮಸ್ಯೆ ಎದುರಾದರೂ, QR ಕೋಡ್ ಸ್ಕ್ಯಾನ್ ಮಾಡಿ ಸಂಬಂಧಪಟ್ಟ ಇಲಾಖೆಗೆ ದೂರು ಸಲ್ಲಿಸಲು ಅವಕಾಶ ಕಲ್ಪಿಸುವ ಉದ್ದೇಶ ಇದಾಗಿದೆ. ಮೆಡಿಕಲ್ ಸ್ಟೋರ್‌ಗಳಲ್ಲೂ ಔಷಧಿ ಅಥವಾ ಸೇವೆಗೆ ಸಂಬಂಧಿಸಿದ ಸಮಸ್ಯೆಗಳಿದ್ದರೆ QR ಕೋಡ್ ಮೂಲಕ ದೂರು ನೀಡಬಹುದಾಗಿದೆ.
ರಾಜ್ಯಾದ್ಯಂತ ಇರುವ ಎಲ್ಲಾ ಹೋಟೆಲ್‌ಗಳು ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಇನ್ನು ಮುಂದೆ QR ಕೋಡ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಗ್ರಾಹಕರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಹೊಸ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
QR ಕೋಡ್‌ನಿಂದ ಏನು ಪ್ರಯೋಜನ?
ಹೋಟೆಲ್‌ಗಳಲ್ಲಿ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ನೈರ್ಮಲ್ಯ ಕುರಿತು ಸಮಸ್ಯೆ ಎದುರಾದರೆ, ಸಾರ್ವಜನಿಕರು QR ಕೋಡ್ ಸ್ಕ್ಯಾನ್ ಮಾಡಿ ನೇರವಾಗಿ ದೂರು ಸಲ್ಲಿಸಬಹುದು.ಅದೇ ರೀತಿ ಮೆಡಿಕಲ್ ಸ್ಟೋರ್‌ಗಳಲ್ಲಿ ಔಷಧಗಳ ಲಭ್ಯತೆ, ಸೇವೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರು QR ಕೋಡ್ ಮೂಲಕ ದೂರು ದಾಖಲಿಸಲು ಅವಕಾಶ ಕಲ್ಪಿಸಲಾಗುತ್ತದೆ.
ದೂರು ನೀಡಿದರೆ ಅಧಿಕಾರಿಗಳಿಂದ ಕ್ರಮ
ಗ್ರಾಕರು ಮೊಬೈಲ್ ಫೋನ್‌ನಲ್ಲಿ QR ಕೋಡ್ ಸ್ಕ್ಯಾನ್ ಮಾಡಿ ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ತಕ್ಷಣವೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬಹುದು. ದೂರು ದಾಖಲಾದ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಈ ವ್ಯವಸ್ಥೆಯಿಂದ ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವುದರ ಜೊತೆಗೆ ಸೇವಾ ವಲಯದಲ್ಲಿ ಪಾರದರ್ಶಕತೆ ಹೆಚ್ಚಲಿದೆ ಎಂದು ಯು.ಟಿ. ಖಾದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಂತ್ರಜ್ಞಾನ ಆಧಾರಿತ ಹೊಸ ಕ್ರಮ
ಕರ್ನಾಟಕದಲ್ಲಿ ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಸ್ವೀಕರಿಸಿ ಪರಿಹರಿಸುವ ಉದ್ದೇಶದಿಂದ ಈ ತಂತ್ರಜ್ಞಾನ ಆಧಾರಿತ ಕ್ರಮವನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಹೋಟೆಲ್‌ಗಳು ಮತ್ತು ಮೆಡಿಕಲ್ ಸ್ಟೋರ್‌ಗಳಲ್ಲಿ ಸೇವೆಯ ಗುಣಮಟ್ಟವನ್ನು ಕಾಯ್ದುಕೊಳ್ಳಲು ಇದು ನೆರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

