ಬೆಂಗಳೂರು: ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಈ ಬಾರಿ ಶಾಸಕ ಮಂಕಾಳು ವೈದ್ಯ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಈ ಹಿನ್ನೆಲೆಯಲ್ಲಿ ಅಸಮಾಧಾನ ಶಮನಮಾಡುವ ನಿಟ್ಟಿನಲ್ಲಿ ಮಂಕಾಳು ವೈದ್ಯ ಅವರಿಗೆ ಡೆಪ್ಯುಟಿ ಸ್ಪೀಕರ್ ಸ್ಥಾನ ನೀಡುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ (ಡೆಪ್ಯೂಟಿ ಸ್ಪೀಕರ್) ಹುದ್ದೆಗೆ ಮಂಕಾಳು ವೈದ್ಯ ಅವರು ಇಂದು ನಾಮಪತ್ರ ಸಲ್ಲಿಸಿದರು. ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಲಕ್ಷ್ಮಣ ಸವದಿ, ಹೆಚ್.ಸಿ. ಬಾಲಕೃಷ್ಣ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಶಾಸಕ ಶಿವರಾಮ್ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು.

