HomeKarnatakaನಾಗೇಂದ್ರ ಬ್ಲ್ಯಾಕ್ ಮೇಲ್ ಮಾಡಿ ಸಚಿವರಾಗಿದ್ದಾರೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ನಾಗೇಂದ್ರ ಬ್ಲ್ಯಾಕ್ ಮೇಲ್ ಮಾಡಿ ಸಚಿವರಾಗಿದ್ದಾರೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಬೆಂಗಳೂರು: ವಿಧಾನಮಂಡಲದ ಅಧಿವೇಶನದ ಉಭಯ ಸದನಗಳಲ್ಲಿಯೂ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷ ಸದಸ್ಯರು ಪಟ್ಟು ಹಿಡಿದರು. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಹೊತ್ತಿರುವ ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ನೀಡಿದ್ದು ಸರಿಯಲ್ಲ. ನಾಗೇಂದ್ರ ಅವರನ್ನು ಸಚ್ಜಿವ ಸಂಪುಟದಿಂದ ತಕ್ಷಣ ವಜಾಗೊಳಿಸಬೇಕು. ಅಲ್ಲಿಯವರೆಗೂ ಕಲಾಪ ನಡೆಯಲು ಬಿಡುವುದಿಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಪ್ರತಿಭಟನೆ ನಡೆಸಿದರು.

ವಿಧಾನಪರಿಷತ್ ನಲ್ಲಿ ವಿಷಯ ಪ್ರಸ್ತಾಪಿಸಿದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ನಾಗೇಂದ್ರ ಅವರು ಕಾಂಗ್ರೆಸ್ ನಾಯಕರನ್ನು ಬ್ಲ್ಯಾಕ್ ಮೇಲ್ ಮಾಡಿ ಹೆದರಿಸಿ ಸಚಿವರಾಗಿದ್ದಾರೆ ಎಂದು ಆರೋಪಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಗೇಂದ್ರ ಬ್ಲ್ಯಾಕ್‌ ಮೇಲ್ ಮಾಡಿ ಸಚಿವರಾಗಿದ್ದು, ಸರ್ಕಾರ ಅವರ ರಕ್ಷಣೆಗೆ ನಿಂತು ಸಾಕ್ಷ್ಯನಾಶಕ್ಕೆ ಕೈಜೋಡಿಸಿದೆ. ನಾಗೇಂದ್ರ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸುವುದಾಗಿ ಹಾಗೂ ರಾಜೀನಾಮೆ ನೀಡಿದರೆ ಮಾತ್ರ ಕಲಾಪಕ್ಕೆ ಸಹಕರಿಸುವುದಾಗಿ ಎಚ್ಚರಿಸಿದರು. ಇದಕ್ಕೆ ವಿಪಕ್ಷದ ಇತರ ಸದಸ್ಯರು ದ್ವನಿಗೂಡಿಸಿದರು.

ಬಿಜೆಪಿ ಸದಸ್ಯರು ಮೊದಲು ರಾಜೀನಾಮೆ, ನಂತರ ಕಲಾಪ ಎಂದು ಘೋಷಣೆ ಕೂಗಿದರು. ಇದರಿಂದ ಸದನದಲ್ಲಿ ಕೆಲಕಾಲ ಗದ್ದಲ ಉಂಟಾಯಿತು. ಬಿಜೆಪಿ ನಾಯಕರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಸಚಿವ ಯು.ಟಿ. ಖಾದರ್, ಪ್ರಕರಣದಲ್ಲಿ ಈಗಾಗಲೇ ನ್ಯಾಯಾಲಯದ ತೀರ್ಪು ಬಂದಿರುವುದನ್ನು ಉಲ್ಲೇಖಿಸಿ, ನ್ಯಾಯಾಲಯಕ್ಕಿಂತ ತಾವು ದೊಡ್ಡವರೇ? ಎಂದು ವಿಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಾಗೇಂದ್ರ ಅವರಿಗೆ ಪ್ರಕರಣದಲ್ಲಿ ಕ್ಲೀನ್‌ಚಿಟ್ ಸಿಕ್ಕಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಸಿಐಡಿ ತನಿಖೆಯಲ್ಲಿ ನಾಗೇಂದ್ರ ಅವರಿಗೆ ಕ್ಲೀನ್‌ಚಿಟ್ ಸಿಕ್ಕಿದೆ. ನಾಗೇಂದ್ರ ಅಪರಾಧಿ ಅಲ್ಲ, ಅವರು ಕೇವಲ ಆರೋಪ ಎದುರಿಸುತ್ತಿರುವ ವ್ಯಕ್ತಿ ಎಂದು ಸಮರ್ಥಿಸಿಕೊಂಡರು.

ಒಟ್ಟಾರೆ ಸಚಿವ ನಾಗೇಂದ್ರ ಅವರನ್ನು ಮತ್ತೆ ಮಂತ್ರಿಯನ್ನಾಗಿ ಮಾಡಿದ ವಿಚಾರ ವಿಧಾನಸಭೆ ಹಾಗೂ ವಿಧಾನಪರಿಷತ್ ಕಲಾಪದ ವೇಳೆ ಭಾರಿ ಚರ್ಚೆಗೆ ಹಾಗೂ ಗದ್ದಲಕ್ಕೆ ಕಾರಣವಾಯಿತು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular