HomeKarnatakaಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ: ಪ್ರಕರಣ ದಾಖಲು

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ: ಪ್ರಕರಣ ದಾಖಲು

ಬೆಂಗಳೂರು: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿಸುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆ ಪ್ರಕರಣ ಭಾರಿ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ಅವರನ್ನು ಬೇರೆ ಸೆಲ್ ಗೆ ಸ್ಥಳಾಂತರುಇಸಲಾಗಿತ್ತು. ಇದೀಗ ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದೆ ಜೈಲಿನ ಸೆಲ್ ನಲ್ಲೇ ಪ್ರಜ್ವಲ್ ರೇವಣ್ಣ ಮೊಬೈಲ್ ನಲ್ಲಿ ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸಿಸಿಬಿ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿದಾಗ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ ಡ್ರೈವ್, ನೋಟ್ ಬುಕ್ ಗಳು ಪತ್ತೆಯಾಗಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಕಾರಾಗೃಹ ಇಲಾಖೆ ಪ್ರಜ್ವಲ್ ರೇವಣ್ಣ ಅವರನ್ನು ವಿವಿಐಪಿ ಸೆಲ್ ನಿಂದ ಜನರಲ್ ಸೆಲ್ ಗೆ ಸ್ಥಳಾಂತರಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆಯಾಗಿದೆ ಎನ್ನಲಾಗಿದೆ. ಪೊಲಿಸರು ಪ್ರಜ್ವಲ್ ಸೆಲ್ ಮೇಲೆ ದಾಳಿ ನಡೆಸಿದಾಗ ಮತ್ತೊಂದು ಮೊಬೈಲ್ ಸಿಕ್ಕಿದೆ. ದೇವರ ಫೋಟೊ‌ ಹಿಂದೆ ಇರಿಸಲಾಗಿದ್ದ ವಿವೋ ಕಂಪನಿಯ ಮೊಬೈಲ್ ಪತ್ತೆಯಾಗಿದ್ದು, ಸಿಮ್ ಇಲ್ಲದೆ ಸ್ವಿಚ್ ಆಫ್ ಆಗಿದ್ದ ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಈ ಮೊಬೈಲ್ ಆರೋಪಿ ಸೆಲ್ ಗೆ ಬಂದಿದ್ದು ಹೇಗೆ? ಯಾರು ಈ ಮೊಬೈಲ್ ಬಳಸುತ್ತಿದ್ದರು ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular