HomeKarnatakaನಾಗರಪಂಚಮಿ ಹಬ್ಬದಂದೆ ದುರಂತ: ಹಾವು ಕಡಿದು ಮಹಿಳೆ ಸಾವು

ನಾಗರಪಂಚಮಿ ಹಬ್ಬದಂದೆ ದುರಂತ: ಹಾವು ಕಡಿದು ಮಹಿಳೆ ಸಾವು

ಬೆಳಗಾವಿ: ನಾಡಿನಾದ್ಯಂತ ನಾಗರಪಂಚಮಿ ಹಬ್ಬದ ಸಡಗರ-ಸಂಭ್ರಮ ಮನೆ ಮಾಡಿದೆ. ಈ ನಡುವೆ ಹಬ್ಬದ ದಿನದಂದೆ ದುರಂತವೊಂದು ಸಂಭವಿಸಿದೆ. ಹಾವು ಕಡಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಈ ದುರಂತ ಸಂಭವಿಸಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಕಾರಿ ಕೊಳಕುಮಂಡಲ ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿದ್ದಾರೆ. ಸತ್ಯವ್ವ ಶಿಂಗೆ (43) ಮೃತ ದುರ್ದೈವಿ.

ಸತ್ಯವ್ವ ಅವರು ತಮ್ಮ ಜಮೀನಿನಲ್ಲಿ ಕಳೆ ತೆಗೆಯುವ ಕೆಲಸದಲ್ಲಿ ನಿರತರಾಗಿದ್ದಾಗ ಕೊಳಕುಮಂಡಲ ಹಾವು ಏಕಾಏಕಿ ಕಚ್ಚಿದೆ. ಹಾವಿನ ವಿಷ ದೇಹಕ್ಕೆ ವ್ಯಾಪಿಸಿ ತೀವ್ರವಾಗಿ ಅಸ್ವಸ್ಥಗೊಂಡ ಸತ್ಯವ್ವ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಡೀ ಊರು ನಾಗರಪಂಚಮಿ ಹಬ್ಬದ ಸಂಭ್ರಮದಲ್ಲಿದ್ದಾಗಲೇ ಈ ದುರಂತ ಸಂಭವಿಸಿದ್ದು, ರಾಯಬಾಗ ಪಟ್ಟಣದಲ್ಲಿ ಸೂತಕದ ಛಾಯೆ ಆವರಿಸಿದೆ. ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular