HomeKarnatakaBIG NEWS : ರಾಜ್ಯದ ಪ್ರಯಾಣಿಕರಿಗೆ ಬಿಗ್ ಶಾಕ್ ; ಶೀಘ್ರವೇ KSRTC , BMTC...

BIG NEWS : ರಾಜ್ಯದ ಪ್ರಯಾಣಿಕರಿಗೆ ಬಿಗ್ ಶಾಕ್ ; ಶೀಘ್ರವೇ KSRTC , BMTC ಟಿಕೆಟ್ ದರ ಏರಿಕೆ ಸಾಧ್ಯತೆ

ಬೆಂಗಳೂರು : KSRTC, BMTC ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಟಿಕೆಟ್ ದರ ಏರಿಕೆ ಕುರಿತು ಸರ್ಕಾರದಲ್ಲಿ ಚರ್ಚೆ ನಡೆಯುತ್ತಿದೆ. ಡೀಸೆಲ್ ಬೆಲೆ ಏರಿಕೆಯಿಂದ ನಿಗಮಗಳಿಗೆ ನಿರಂತರವಾಗಿ ನಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ದರ ಪರಿಷ್ಕರಣೆಗೆ ಸಮಿತಿ ರಚಿಸಲಾಗಿದ್ದು, ಸಮಿತಿಯ ವರದಿ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದು ಟಿಕೆಟ್ ದರ ಹೆಚ್ಚಳದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಏರಿಕೆಯ ಸುಳಿವು ಸಿಕ್ಕಿದೆ. ಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ನಿಗಮಗಳಿಗೆ ಭಾರೀ ನಷ್ಟ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಟಿಕೆಟ್ ದರ ಪರಿಷ್ಕರಣೆ ಕುರಿತು ಈಗಾಗಲೇ ಸಮಿತಿ ರಚಿಸಲಾಗಿದೆ.

ಸಮಿತಿಯು ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿಗತಿ ಹಾಗೂ ಕಾರ್ಯನಿರ್ವಹಣೆಯನ್ನು ಪರಿಶೀಲಿಸುತ್ತಿದೆ. ಸಮಿತಿ ತನ್ನ ವರದಿ ನೀಡಿದ ಬಳಿಕ ಟಿಕೆಟ್ ದರ ಏರಿಕೆ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡೀಸೆಲ್ ದರ ಈಗಾಗಲೇ ಆರು ಬಾರಿ ಏರಿಕೆಯಾಗಿದೆ. ಇದರಿಂದ ಸಾರಿಗೆ ನಿಗಮಗಳಿಗೆ ವಾರಕ್ಕೆ ಸುಮಾರು ₹7 ಕೋಟಿ ನಷ್ಟವಾಗುತ್ತಿದೆ. ಹೀಗಾಗಿ ಟಿಕೆಟ್ ದರ ಹೆಚ್ಚಳ ಅನಿವಾರ್ಯವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಸಮಿತಿಯ ವರದಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದು, ಬಳಿಕ ಟಿಕೆಟ್ ದರ ಏರಿಕೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular