ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಮೊದಲ ಸುತ್ತು ಹಾಗೂ ಎಂಜಿನಿಯರಿಂಗ್ ಸೇರಿದಂತೆ ಇತರ ಸಿಇಟಿ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.
ಆಗಸ್ಟ್ 13ರಂದು ಬೆಳಿಗ್ಗೆ 9ಗಂಟೆವರೆಗೆ ಅಭ್ಯರ್ಥಿಗಳು ನಮೂದಿಸಿದ್ದ ಇಚ್ಛೆಗಳನ್ನು (Options) ಅಣಕು ಫಲಿತಾಂಶಕ್ಕೆ ಪರಿಗಣಿಸಲಾಗಿದೆ.
ಆಗಸ್ಟ್ 20ರಂದು ಬೆಳಿಗ್ಗೆ 9ಗಂಟೆವರೆಗೆ ಇಚ್ಚೆಗಳನ್ನು ಹೊಸದಾಗಿ ಸೇರಿಸುವುದಕ್ಕೆ/ ಬೇಡವಾದಲ್ಲಿ ತೆಗೆದುಹಾಕುವುದಕ್ಕೆ/ಕ್ರಮಾಂಕ ಬದಲಿಸಿಕೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ.
ಇದಲ್ಲದೆ ಯುಜಿ ನೀಟ್- 26ರಲ್ಲಿ ಅರ್ಹತೆ ಪಡೆದು, ಇದುವರೆಗೂ ಅರ್ಜಿಯನ್ನೇ ಸಲ್ಲಿಸದಿರುವ ಅಭ್ಯರ್ಥಿಗಳಿಗೆ (Clause- A ಮತ್ತು Clause- Y) ಹೊಸದಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 18ರಂದು ಸಂಜೆ 6ರವರೆಗೆ ಅವಕಾಶ ನೀಡಲಾಗಿದೆ. ನಂತರ ಅವರು ವೆರಿಫಿಕೇಷನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಂಡು, ಆಪ್ಷನ್ಸ್ ದಾಖಲಿಸಬಹುದು.
ಇದು ಅಣಕು ಫಲಿತಾಂಶ ವಾಗಿರುವ ಕಾರಣ ಯಾರೂ ಕಾಲೇಜಿಗೆ ಹೋಗಿ ಪ್ರವೇಶ ಪಡೆಯುವಂತಿಲ್ಲ. ಅಂತಿಮ ಸುತ್ತಿನ ಫಲಿತಾಂಶವನ್ನು ನಂತರದ ದಿನಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
https://twitter.com/KEA_karnataka/status/2089304187247145271

