HomeKarnatakaBREAKING : ಬೆಂಗಳೂರಲ್ಲಿ ಡಬಲ್ ಮರ್ಡರ್ ಕೇಸ್’ಗೆ ಬಿಗ್ ಟ್ವಿಸ್ಟ್ ; ಲವರ್ ಜೊತೆ ಸೇರಿ...

BREAKING : ಬೆಂಗಳೂರಲ್ಲಿ ಡಬಲ್ ಮರ್ಡರ್ ಕೇಸ್’ಗೆ ಬಿಗ್ ಟ್ವಿಸ್ಟ್ ; ಲವರ್ ಜೊತೆ ಸೇರಿ ಪತಿ, ಮಗನನ್ನು ಕೊಂದ ಪಾಪಿ ಪತ್ನಿ!

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ನಡೆದ ಡಬಲ್ ಮರ್ಡರ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತಿಯ ಆಸ್ತಿಯ ಮೇಲೆ ಕಣ್ಣಿಟ್ಟಿದ್ದ ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಪತಿ ಹಾಗೂ ಮಗನನ್ನು ಹತ್ಯೆ ಮಾಡಿರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.

ಹುಲಿಯೂರು ದುರ್ಗದ ನಿವಾಸಿ ಅಭಿನಂದನ್ (33) ಹಾಗೂ ಅವರ ಮಗ ಯದುವೀರ್ (5) ಹತ್ಯೆಗೀಡಾದವರು. ಅಭಿನಂದನ್ ಆರ್ಥಿಕವಾಗಿ ಸಬಲರಾಗಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನು ಹೊಂದಿದ್ದರು ಎನ್ನಲಾಗಿದೆ. ಈ ಆಸ್ತಿಯ ಮೇಲೆ ಪತ್ನಿ ಹರಿಣಿ ಕಣ್ಣಿಟ್ಟಿದ್ದಳು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹರಿಣಿಗೆ ವಿನಯ್ ಎಂಬಾತನೊಂದಿಗೆ ಅಕ್ರಮ ಸಂಬಂಧವಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪತಿ ಅಭಿನಂದನ್ ಹಾಗೂ ಮಗನನ್ನು ಹತ್ಯೆ ಮಾಡಲು ಹರಿಣಿ ತನ್ನ ಪ್ರಿಯಕರ ವಿನಯ್ ಜೊತೆ ಸೇರಿ ಸಂಚು ರೂಪಿಸಿದ್ದಾಳೆ ಎನ್ನಲಾಗಿದೆ.

ಮೊನ್ನೆ ರಾತ್ರಿ ಸುಮಾರು 11 ಗಂಟೆಗೆ ವಿನಯ್’ನನ್ನು ಮನೆಗೆ ಕರೆಸಿಕೊಂಡಿದ್ದ ಹರಿಣಿ, ಹತ್ಯೆ ನಡೆಸುವ ಮುನ್ನ ಮನೆಯ ಸಿಸಿ ಕ್ಯಾಮೆರಾಗಳನ್ನು ಆಫ್ ಮಾಡಿದ್ದಳು ಎಂದು ತಿಳಿದುಬಂದಿದೆ. ಬಳಿಕ ಹರಿಣಿ ಜೊತೆ ಸೇರಿ ವಿನಯ್, ಅಭಿನಂದನ್ ನನ್ನು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹರಿಣಿ ಹಾಗೂ ವಿನಯ್’ನನ್ನು ವಿಚಾರಣೆಗೊಳಪಡಿಸಿದಾಗ ಪ್ರಕರಣದ ಸತ್ಯ ಬಯಲಾಗಿದೆ. ವಿಚಾರಣೆ ವೇಳೆ ಹರಿಣಿ ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ವಿನಯ್’ನನ್ನು ಬಂಧಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಅಸಹಜ ಸಾವು ಎಂದು ಬಿಂಬಿಸಲು ಸಂಚು

ಪತಿಯ ಸಾವನ್ನು ಅಸಹಜ ಸಾವು ಎಂದು ಬಿಂಬಿಸಲು ಹರಿಣಿ ಹಾಗೂ ವಿನಯ್ ಸಂಚು ರೂಪಿಸಿದ್ದರು ಎನ್ನಲಾಗಿದೆ. ಈ ವೇಳೆ ಕೈಯಿಂದ ಮೂಗು ಒತ್ತಿ ಅಭಿನಂದನ್ನನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.

ಇನ್ನು ಬಾಲಕ (ಮಗ) ಕೊಲೆಗೆ ಸಾಕ್ಷಿ ಹೇಳುತ್ತಾನೆ ಎಂದು ಹರಿಣಿ ಆತನ ಕತ್ತು ಹಿಸುಕಿ ಹತ್ಯೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಪ್ರಕರಣವನ್ನು ಸಹಜ ಅಥವಾ ಅಸಹಜ ಸಾವು ಎಂಬಂತೆ ಬಿಂಬಿಸಲು ಯತ್ನಿಸಲಾಗಿತ್ತು ಎನ್ನಲಾಗಿದೆ.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹರಿಣಿ ಹಾಗೂ ವಿನಯ್’ನನ್ನು ವಿಚಾರಣೆಗೊಳಪಡಿಸಿದಾಗ ಹಲವು ಅಂಶಗಳು ಬಯಲಾಗಿವೆ. ವಿಚಾರಣೆ ವೇಳೆ ಹರಿಣಿ ನೀಡಿದ ಮಾಹಿತಿ ಆಧಾರದ ಮೇಲೆ ಪೊಲೀಸರು ವಿನಯ್’ನನ್ನು ಬಂಧಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular