ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಆಗಸ್ಟ್ 21 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ರಾಮ್ ಲೈಫ್ ಇನ್ಸೂರೆನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಪಿಯುಸಿ ಅಥವಾ ಯಾವುದೇ ಪದವಿ ತೇರ್ಗಡೆಯಾಗಿರುವ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದೆ ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ಡಿ. ದೇವರಾಜ ಅರಸುರವರ 111ನೇ ಜನ್ಮ ದಿನಾಚರಣೆ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಆ.20ರಂದು ಬೆಳಗ್ಗೆ 11.00ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಡಿ. ದೇವರಾಜ ಅರಸುರವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವರು ನೆರವೇರಿಸುವರು. ಶಾಸಕರಾದ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಜಿಲ್ಲೆಯ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಜನಪ್ರತಿನಿಧಿಗಳು, ಪಾಲಿಕೆ ಮಹಾಪೌರರು, ವಿವಿಧ ನಿಗಮ/ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಹಿಂದುಳಿದ ವರ್ಗಗಳ ಜಾತಿಯ ಒಕ್ಕೂಟದ ಮುಖಂಡರು/ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ಹಿಂ.ವ.ಕ.ಇ.ಯ ಜಿಲ್ಲಾ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಿವಮೊಗ್ಗ ಶಂಕರಘಟ್ಟ, ಜ್ಞಾನಸಹ್ಯಾದ್ರಿಯ ಕನ್ನಡ ಭಾರತಿ ಕುವೆಂಪು ವಿಶ್ವವಿದ್ಯಾಲಯದ ನಿರ್ದೇಶಕರು ಮತ್ತು ಪ್ರಾಧ್ಯಾಪಕರಾದ ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಇವರಿಂದ ಡಿ.ದೇವರಾಜ ಅರಸುರವರ ಜೀವನ ಚರಿತ್ರೆ ಮತ್ತು ಸಾಧನೆಗಳು ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.
ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಇಲಾಖೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಅಂದು ಬೆಳಗ್ಗೆ 8.30ಕೆ ಶಿವಮೊಗ್ಗ ನಗರದ ಸೈನ್ಸ್ ಮೈದಾನದಿಂದ ಕುವೆಂಪು ರಂಗಮಂದಿರದವರೆಗೆ ವಿವಿಧ ಜನಪದ ತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಡಿ.ದೇವರಾಜು ಅರಸುರವರ ಭಾವಚಿತ್ರದ ಮೆರವಣೆಗೆಯನ್ನು ಆಯೋಜಿಸಲಾಗಿದೆ.

