HomeKarnatakaಹನೂರು ಎನ್‌ಕೌಂಟರ್: ಒಕ್ಕೂಟ ವ್ಯವಸ್ಥೆಯಲ್ಲಿ ಬೇರೆ ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲದು; ಡಿಕೆಶಿ

ಹನೂರು ಎನ್‌ಕೌಂಟರ್: ಒಕ್ಕೂಟ ವ್ಯವಸ್ಥೆಯಲ್ಲಿ ಬೇರೆ ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲದು; ಡಿಕೆಶಿ

ಬೆಂಗಳೂರು-“ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಹನೂರು ಶೂಟೌಟ್ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ತಮಿಳುನಾಡು ಮಾಜಿ ಸಿಎಂ ಪನೀರ್ ಸೇಲ್ವಂ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ತಮಿಳುನಾಡಿನ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಲ್ಲಿ ನಾನು ಯಾವುದೇ ರೀತಿಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಸಮಸ್ಯೆ ಇರುತ್ತದೆ. ಅದನ್ನು ಅವರೂ ತಿಳಿದುಕೊಳ್ಳಬೇಕು. ನಮ್ಮ ರಾಜ್ಯವನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದು ನಮಗೆ ತಿಳಿದಿದೆ. ಅವರು ತಮ್ಮ ಕೆಲಸವನ್ನು ಮಾಡಲಿ. ನಾವು ನಮ್ಮ ಕೆಲಸವನ್ನು ಮಾಡುತ್ತೇವೆ. ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ನಾನು ಬಯಸುವುದಿಲ್ಲ. ನಮ್ಮ ರಾಜ್ಯಕ್ಕಿರುವ ಪವಿತ್ರತೆಯನ್ನು ನಾವು ಕಾಪಾಡಿಕೊಳ್ಳಬೇಕು, ರಕ್ಷಿಸಬೇಕು” ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣದ ತನಿಖೆ ಆಗಬೇಕು ಎಂದು ತಮಿಳುನಾಡು ಸಿಎಂ ವಿಜಯ್ ಹೇಳಿಕೆ ನೀಡಿರುವ ಬಗ್ಗೆ ಕೇಳಿದಾಗ, “ನಾನು ಇದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಇದು ಸಾಮಾನ್ಯ ಚರ್ಚೆ. ಅವರು ತಮ್ಮ ಕೆಲಸವನ್ನು ಮಾಡಬೇಕು, ನಾವು ನಮ್ಮ ಕೆಲಸವನ್ನು ಮಾಡಬೇಕು” ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular