HomeAgricultureಮುಂಗಾರು ಬೆಳೆ ವಿಮೆ : ಸಾಲ ಪಡೆದ ರೈತರ ನೋಂದಣಿ ದಿನಾಂಕ ಆ. 31ರವರೆಗೆ ವಿಸ್ತರಣೆ

ಮುಂಗಾರು ಬೆಳೆ ವಿಮೆ : ಸಾಲ ಪಡೆದ ರೈತರ ನೋಂದಣಿ ದಿನಾಂಕ ಆ. 31ರವರೆಗೆ ವಿಸ್ತರಣೆ

​ಶಿವಮೊಗ್ಗ :    2026-27ನೇ ಸಾಲಿನ ಮುಂಗಾರು ಹಂಗಾಮಿನ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ’ ಯೋಜನೆಯಡಿ ಬೆಳೆ ಸಾಲ ಪಡೆದ ರೈತರಿಗೆ ನೋಂದಣಿ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಸರ್ಕಾರದಿಂದ ಆಯ್ಕೆಯಾದ ಅಗ್ರಿಕಲ್ಚರ್ ಇನ್‌ಶ್ಯೂರೆನ್ಸ್ ಕಂಪನಿ ಸಹಯೋಗದಲ್ಲಿ ಈ ಯೋಜನೆ ಜಾರಿಯಾಗುತ್ತಿದ್ದು, ಭತ್ತ (ನೀರಾವರಿ/ಮಳೆ ಆಶ್ರಿತ) ಹಾಗೂ ರಾಗಿ (ಮಳೆ ಆಶ್ರಿತ) ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು ಈ ಹಿಂದೆ ಆಗಸ್ಟ್ 14 ಕೊನೆಯ ದಿನವಾಗಿತ್ತು. ರೈತರ ಕೋರಿಕೆಯ ಮೇರೆಗೆ ಇದೀಗ ಕೇವಲ ಸಾಲ ಪಡೆದ ರೈತರಿಗೆ ಮಾತ್ರ ಅನ್ವಯವಾಗುವಂತೆ ದಿನಾಂಕವನ್ನು ಆ. 31ರವರೆಗೆ ವಿಸ್ತರಿಸಲಾಗಿದೆ. ಬಿತ್ತನೆ ಅಥವಾ ನಾಟಿ ಮಾಡುವ ಮುನ್ನವೇ ರೈತರು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

 ಬೆಳೆ ಸಾಲ ಪಡೆದ ರೈತರು ಈ ವಿಮಾ ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದರೆ, ನೋಂದಣಿ ಕೊನೆಯ ದಿನಾಂಕಕ್ಕೆ 7 ದಿನ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ಪತ್ರ ಸಲ್ಲಿಸಿ ಯೋಜನೆಯಿಂದ ಹೊರಗುಳಿಯಬಹುದು. ಸಾಲ ಪಡೆಯದ ರೈತರು ಪಹಣಿ ಮತ್ತು ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಸಮೀಪದ ಬ್ಯಾಂಕ್, ಹಣಕಾಸು ಸಂಸ್ಥೆ ಅಥವಾ ಸಿಎಸ್‌ಸಿ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕೃಷಿ, ಕಂದಾಯ, ಸಹಕಾರ ಇಲಾಖೆ, ಬ್ಯಾಂಕ್‌ಗಳು ಅಥವಾ ಸರ್ಕಾರದ ಸಂರಕ್ಷಣೆ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಕೋರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಆಗಸ್ಟ್ 21 : ಉದ್ಯೋಗ ನೇರ ಸಂದರ್ಶನ

 ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಆಗಸ್ಟ್ 21 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ರಾಮ್ ಲೈಫ್ ಇನ್ಸೂರೆನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.

 ಪಿಯುಸಿ ಅಥವಾ ಯಾವುದೇ ಪದವಿ ತೇರ್ಗಡೆಯಾಗಿರುವ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದೆ ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular